ಬೆಂಗಳೂರು : ಮುಂದಿನ ಮೂರು ದಿನ ರಾಜ್ಯಾಧ್ಯಂತ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಮೇ.10ರಂದು ಮತದಾನ ನಡೆಯಲಿದೆ. ಈ ಮತದಾನಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ.
ಈ ಬಗ್ಗೆ ಮಾಹಿತಿ ಬಿಡುಗಡೆ ಮಾಡಿರುವಂತ ಹವಾಮಾನ ಇಲಾಖೆಯು, ನಾಳೆ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದೆ. ಮೇ.9ರಂದು ಚಾಮರಾಜನಗ ಹಾಗೂ ಮೈಸೂರಿನಲ್ಲಿ ಮಳೆಯಾದರೆ, ಮೇ.10ರಂದು ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಮೈಸೂರಿನಲ್ಲಿ ಭಾರೀ ಮಳೆಯಲಾಗಿದೆ. ಹೀಗಾಗಿ ಈ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಕೂಡ ಘೋಷಿಸಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾದರೆ, ದಕ್ಷಿಣ ಒಳನಾಡಿನ ವ್ಯಾಪ್ತಿಯ ಜಿಲ್ಲೆಯಲ್ಲಿ, ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದಂತ ಗದಗ, ರಾಯಚೂರು, ಬೀದರ್, ಕಲಬುರ್ಗಿ, ಕೊಪ್ಪಳ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಅಲ್ಲಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಮೇ.10 ರಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಈ ದಿನದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆ ಇರುವುದರಿಂದ, ಮತದಾನಕ್ಕೆ ವರುಣ ಅಡ್ಡಿಯಾಗುವ ಆತಂಕ ಎದುರಾಗಿದೆ.
