Connect with us

Hi, what are you looking for?

ರಾಜ್ಯ

ಚುನಾವಣಾ ಕರ್ತವ್ಯಕ್ಕೆ ಹಾಜರಾಗುವ ಅಧಿಕಾರಿ, ಸಿಬ್ಬಂದಿಗಳ ‘ಗೌರವಧನ’ ಎಷ್ಟಿದೆ ಗೊತ್ತಾ!?

3

ಬೆಂಗಳೂರು : ಈಗಾಗಲೇ ಚುನಾವಣಾ ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿತ್ತು. ಈ ಬೆನ್ನಲ್ಲೇ ವಿಧಾನಸಭಾ ಚುನಾವಣೆಯಲ್ಲಿ ಕರ್ತವ್ಯ ನಿರತ ಅಧಿಕಾರಿ, ಸಿಬ್ಬಂದಿಗಳ ಗೌರವಧನವನ್ನು ನಿಗದಿ ಪಡಿಸಲಾಗಿದೆ.

ಈ ಬಗ್ಗೆ ತುಮಕೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ವಿಧಾನಸಭಾ ಸಾರ್ವತ್ರಿಕೆ ಚುನಾವಣೆ-2023ರ ಸಂಬಂಧ ಮತಗಟ್ಟೆ ಅಧಿಕಾರಿಗಳಿಗೆ ಗೌರವಧನ ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ.

ಕರ್ನಾಟಕ ಸರ್ಕಾರದ ದಿನಾಂಕ 24-05-2018ರ ನಡವಳಿ ಆದೇಶದಂತೆ ಗೌರವಧನವನ್ನು ಪಾವತಿಸಲಾಗುತ್ತದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಅಧಿಕಾರಿ, ಸಿಬ್ಬಂದಿಗಳಿಗೆ ಈ ಕೆಳಕಂಡಂತೆ ಗೌರವಧನವನ್ನು ನಿಗದಿಪಡಿಸಲಾಗಿದೆ ಎಂದಿದ್ದಾರೆ.

Advertisement. Scroll to continue reading.

ಹೀಗಿದೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಅಧಿಕಾರಿ, ಸಿಬ್ಬಂದಿಗಳ ಗೌರವಧನ

  • ಪ್ರೆಸಿಡಿಂಗ್ ಆಫೀಸರ್ – ರೂ.500ರಂತೆ 4 ದಿನಕ್ಕೆ ರೂ.2,000
  • ಎ ಆರ್ ಪಿ ಓ – ರೂ.350ರಂತೆ ನಾಲ್ಕು ದಿನಕ್ಕೆ ರೂ.1,400
  • ಪೊಲಿಂಗ್ ಆಫೀಸರ್ ರೂ.350ರಂತೆ 4 ದಿನಕ್ಕೆ ರೂ.1050
  • ಮೈಕ್ರೋ ವೀಕ್ಷಕರು – ರೂ.1,500
  • ಪೊಲಿಂಗ್ ದಿನದ ಬಿಎಲ್‌ಓಗಳಿಗೆ ರೂ.350
  • ಡಿ-ಗ್ರೂಪ್ ಸಿಬ್ಬಂದಿಗೆ ರೂ.200

ಈ ಮೇಲ್ಕಂಡಂತೆ ಮತಗಟ್ಟೆ ಅಧಿಕಾರಿಗಳು, ಮತಏಣಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವಧನ ಪಾವತಿಸಲು ಸೂಚಿಸಲಾಗಿದೆ. ಇದು ರಾಜ್ಯದ ಎಲ್ಲಾ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಳ್ಳುವ ಅಧಿಕಾರಿ, ಸಿಬ್ಬಂದಿಗಳಿಗೂ ಅನ್ವಯಿಸಲಿದೆ. ಮೇ.10 ರಂದು ಮತದಾನ, ಮೇ.13ರಂದು ಮತಏಣಿಕೆ ಸೇರಿದಂತೆ ಚುನಾವಣಾ ಕರ್ತವ್ಯಕ್ಕೆ ಹಾಜರಾಗುವಂತವರಿಗೆ ಈ ಗೌರವಧನ ನೀಡಲಾಗುತ್ತದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!