ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗುತ್ತಿದೆ.
ಮೊದಲ ಹಂತದಲ್ಲಿ ನಡೆಯುತ್ತಿರುವ ಅಂಚೆ ಮತದಾನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ, ಸಿಎಂ ಬಸವರಾಜಬೊಮ್ಮಯಿ ಮತ್ತು ಸುರೇಶ್ ಕುಮಾರ್, ಜಿಟಿ ದೇವೇಗೌಡ ಅವರು ಮುನ್ನಡೆ ಸಾಧಿಸಿದ್ದಾರೆ.
Advertisement. Scroll to continue reading.

ಕನಪುರದಲ್ಲಿ ಶಿವಕುಮಾರ್, ಎಲ್ ನಾಗೇಂದ್ರ ಬಿ.ಸಿ ಪಾಟೀಲ್, ಅರವಿಂದ್ ಬೆಲ್ಲದ್, ವೀರೆಂದ್ರ ಪಪ್ಪಿ ಮುನ್ನಡೆಯನ್ನು ಸಾಧಿಸಿದ್ದಾರೆ.
- ಕಾರ್ಕಳದಲ್ಲಿ ಬಿಜೆಪಿಯ ಸುನಿಲ್ ಕುಮಾರ್ ಮುನ್ನಡೆ
- ಪುತ್ತೂರಿನಲ್ಲಿ ಕಾಂಗ್ರೆಸ್ ನ ಅಶೊಕ್ ಕುಮಾರ್ ರೈ ಮುನ್ನಡೆ
- ಕಾಪು ಕ್ಷೇತ್ರದಲ್ಲಿ ಗುರ್ಮೆ ಸುರೇಶ್ ಶೆಟ್ಟಿ ಮುನ್ನಡೆ
- ಚಾಮರಾಜನಗರದಲ್ಲಿ ಬಿಜೆಪಿಯ ವಿ.ಸೋಮಣ್ಣಗೆ ಹಿನ್ನಡೆ.
- ನರಗುಂದದಲ್ಲಿ ಬಿಜೆಪಿಯ ಸಿಸಿ ಪಾಟೀಲ್ ಗೆ ಹಿನ್ನಡೆ.
- ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯ ಡಾ.ಕೆ.ಸುಧಾಕರ್ ಗೆ ಹಿನ್ನಡೆ.
- ಬೆಳ್ತಂಗಡಿ ಹರೀಶ್ ಪೂಂಜಾ ಮುನ್ನಡೆ
- ತಿಪಟೂರು ಕಾಂಗ್ರೆಸ್ ಷಡಕ್ಷರಿ ಮುನ್ನಡೆ
- ಬಳ್ಳಾರಿಯ 5 ಕ್ಷೇತ್ರದಲ್ಲಿ ಕಾಂಗ್ರೆಸ್ ಮುನ್ನಡೆ
- ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್ ಭಾರಿ ಮುನ್ನಡೆ
- ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಸವದಿ ಭಾರಿ ಮುನ್ನಡೆ
- ಹಾಸನ ಜಿಲ್ಲೆಯ ಅರಸೀಕೆರೆ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಶಿವಲಿಂಗೇಗೌಡ 8822 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.
- ಶಿಗ್ಗಾಂವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಎಂ ಬಸವರಾಜ ಬೊಮ್ಮಾಯಿ ಮುನ್ನಡೆ
- ಹೊಸಕೋಟೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಗೆ ಹಿನ್ನಡೆ
- ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಮುನ್ನಡೆ
- ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ಸುಧಾಕರ್ ಗೆ ಹಿನ್ನಡೆ
- ರಾಮನಗರದಲ್ಲಿ ನಿಖಿಲ್‌ಗೆ ಹಿನ್ನಡೆ
- ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹಿನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ಮಹೇಶ್ ಟೆಂಗಿನಕಾಯಿ ಭಾರಿ ಮುನ್ನಡೆ ಸಾಧಿಸಿದ್ದಾರೆ.
- ಹಾಸನದಲ್ಲಿ ಸ್ವರೂಪ್ ಪ್ರಕಾಶ್ ಮುನ್ನಡೆ
- ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಚಿವ ಸಿ.ಟಿ.ರವಿಗೆ ಹಿನ್ನಡೆ ಸಾಧಿಸಿದ್ದಾರೆ. ಕಾಂಗ್ರೆಸ್ ನ ತಮ್ಮಯ್ಯ ಭಾರಿ ಮುನ್ನಡೆ ಸಾಧಿಸಿದ್ದಾರೆ.
- ಬೈಂದೂರಿನಲ್ಲಿ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳಿ ಮುನ್ನಡೆ
- ಚಾಮರಾಜನಗರ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ವಿ.ಸೋಮಣ್ಣ ಸೋಲು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್ಟಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
- ಧಾರವಾಡ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಭರ್ಜರಿ ಗೆಲುವು
- ಕಲಘಟಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂತೋಷ್ ಲಾಡ್ 22,000 ಮತಗಳ ಅಂತರದಿಂದ ಗೆಲುವು
- ಶಿಗ್ಗಾವಿಯಲ್ಲಿ ಸತತ ನಾಲ್ಕನೇ ಬಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಗೆಲುವು
- ಹೊಸದುರ್ಗ ಕಾಂಗ್ರೆಸ್‌ನ ಗೋವಿಂದಪ್ಪ ಗೆಲುವು
- ಸೊರಬ ಕ್ಷೇತ್ರದಲ್ಲಿ ಸಹೋದರರ ಸವಾಲ್ ನಲ್ಲಿ ಮಧು ಬಂಗಾರಪ್ಪ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಕುಮಾರ್ ಬಂಗಾರಪ್ಪ ಸೋಲು ಕಂಡಿದ್ದಾರೆ.
- ಗಂಗಾವತಿಯಲ್ಲಿ ಕೆಆರ್ ಪಿಪಿ ಪಕ್ಷದ ಮಾಜಿ ಸಚಿವ ಜನಾರ್ದನರೆಡ್ಡಿಗೆ ಭರ್ಜರಿ ಗೆಲುವು ಸಿಕ್ಕಿದೆ. 8 ಸಾವಿರ ಮತಗಳಿಂದ ಕಾಂಗ್ರೆಸ್ ಇಕ್ಬಾಲ್ ಅನ್ಸಾರಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
- ಕಾರ್ಕಳದಲ್ಲಿ ಗೆಲುವಿನ ನಗೆ ಬೀರಿದ ಸುನಿಲ್ ಕುಮಾರ್
- ಮೂಡಬಿದಿರೆಯಲ್ಲಿ ಗೆಲುವು ಸಾಧಿಸಿದ ಉಮಾನಾಥ್ ಕೋಟ್ಯನ್
- ಚಿಕ್ಕಮಗಳೂರಿನಲ್ಲಿ ಬಿಜೆಪಿ ಸಿ.ಟಿ ರವಿ ಸೋಲು, ಕಾಂಗ್ರೆಸ್ ನ ತಮ್ಮಯ್ಯ ಭರ್ಜರಿ ಗೆಲುವು