ಉಡುಪಿ: ಜಿಲ್ಲೆಯಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಿದ ಬಿಜೆಪಿಗೆ ಯಾವುದೇ ತೊಂದರೆ ಆಗಿಲ್ಲ. ಮತದಾರರು ಕಮಲ ಕೈ ಹಿಡಿದಿದ್ದು, ಎಲ್ಲಾ ಐದು ಕ್ಷೇತ್ರಗಳೂ ಬಿಜೆಪಿ ತೆಕ್ಕೆಗೆ ಬಿದ್ದಿವೆ.
ಈ ಬಾರಿ ಕಾರ್ಕಳ ಹೊರತು ಪಡಿಸಿ ಉಳಿದ ಉಡುಪಿ, ಕಾಪು, ಕುಂದಾಪುರ ಮತ್ತು ಬೈಂದೂರು ಕ್ಷೇತ್ರದಲ್ಲಿ ಹೊಸಮುಖಗಳಿಗೆ ಬಿಜೆಪಿ ಅವಕಾಶ ನೀಡಿತ್ತು.
ಕಾಪುವಿನಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಮೊದಲ ಪ್ರಯತ್ನದಲ್ಲೇ ಗೆಲುವು ಸಾಧಿಸಿದ್ದಾರೆ.
Advertisement. Scroll to continue reading.

ಕಾರ್ಕಳದಲ್ಲಿ ಸಚಿವ, ಹಾಲಿ ಶಾಸಕ ಸುನೀಲ್ ಕುಮಾರ್ ಅವರು ಕಾಂಗ್ರೆಸ್ ನ ಮುನಿಯಾಲು ಉದಯ ಶೆಟ್ಟಿ ವಿರುದ್ಧ ಗೆದ್ದಿದ್ದಾರೆ.
ಉಡುಪಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಪ್ರಸಾದ್ ರಾಜ್ ಕಾಂಚನ್ ವಿರುದ್ಧ ಯಶಪಾಲ್ ಸುವರ್ಣ ಗೆದ್ದಿದ್ದಾರೆ.
ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರ ಕುಂದಾಪುರ ಕ್ಷೇತ್ರದಲ್ಲಿ ಅವರ ಶಿಷ್ಯ ಕಿರಣ್ ಕುಮಾರ್ ಕೊಡ್ಗಿ, ಬೈಂದೂರಿನಲ್ಲಿ ಬಿಜೆಪಿಯ ಹೊಸ ಮುಖ ಗುರುರಾಜ ಶೆಟ್ಟಿ ಗಂಟಿಹೊಳಿ ಗೆಲುವು ಸಾಧಿಸಿದ್ದಾರೆ.
Advertisement. Scroll to continue reading.
