ಬೈಂದೂರು : ತಲೆಯ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿಯೋರ್ವನನ್ನು ಕೊಲೆ ಗೈದಿರುವ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿನಮಕ್ಕಿ ಎಂಬಲ್ಲಿ ನಡೆದಿದೆ.
ಬಾಗಲಕೋಟೆ ಮೂಲದ ಸಂಗಪ್ಪ ಅಲಿಯಾಸ್ ಸಂಗಮೇಶ (42) ಕೊಲೆಯಾದ ವ್ಯಕ್ತಿ. ಈತನೊಂದಿಗೆ ಇದ್ದ ಇನ್ನೋರ್ವ ವಲಸೆ ಕಾರ್ಮಿಕ ಮಂಡ್ಯ ಮೂಲದ ರಾಜಾ (36) ಕೊಲೆ ಮಾಡಿದ ಆರೋಪಿ.
ಸಂಗಪ್ಪ ಹಾಗೂ ರಾಜಾ ವಲಸೆ ಕಾರ್ಮಿಕರಾಗಿ ಕುಂದಾಪುರದಲ್ಲಿ ನೆಲೆಸುತ್ತಿದ್ದು ಕೆಲಸವಿದ್ದಾಗ ತೆರಳಿದ್ದಲ್ಲಿಯೇ ಉಳಿಯುತ್ತಿದ್ದರು. ಅಂತೆಯೇ ಆಲೂರು ಗ್ರಾ.ಪಂ ವ್ಯಾಪ್ತಿಯ ಕಟ್ಟಿನಮಕ್ಕಿಯ ನಾಗೇಂದ್ರ ಆಚಾರ್ಯ ಎನ್ನುವರು ಗುತ್ತಿಗೆ ಕೆಲಸ ಮಾಡುತ್ತಿದ್ದರು. ಆಗ್ಗಾಗೆ ಕೆಲಸದ ನಿಮಿತ್ತ ರಾಜಾ, ಸಂಗಪ್ಪ ಹಾಗೂ ಸಂಗಡಿಗರು ಬರುತ್ತಿದ್ದರು. ಕಳೆದ ವಾರವೂ ಮೂರ್ನಾಲ್ಕು ದಿನ ಇವರೊಂದಿಗೆ ಕೆಲಸ ಮಾಡಿದ್ದು ಶನಿವಾರ ಸಂಬಳ ಪಡೆದು ಕುಂದಾಪುರಕ್ಕೆ ವಾಪಾಸ್ಸಾಗಿದ್ದರು. ಭಾನುವಾರ ಮತ್ತೆ ಕಟ್ಟಿನಮಕ್ಕಿಗೆ ಆಗಮಿಸಿ ನಾಗೇಂದ್ರ ಅವರ ಮನೆ ಎದುರು ನಿರ್ಮಾಣವಾಗುತ್ತಿದ್ದ ಮನೆಯ ಬಳಿ ಶೆಡ್ ನಲ್ಲಿ ಉಳಿದಿದ್ದರು. ಈ ವೇಳೆ ವಲಸೆ ಕಾರ್ಮಿಕರು ಮದ್ಯ ಸೇವಿಸಿದ್ದರು ಎನ್ನಲಾಗಿದೆ. ಕ್ಷುಲ್ಲಕ ಕಾರಣಕ್ಕೆ ರಾಜಾ ಹಾಗೂ ಸಂಗಪ್ಪ ನಡುವೆ ಚಕಮಕಿ ನಡೆದಿದ್ದು ಸಂಗಪ್ಪ ಶೆಡ್ ಎದುರಿನ ಮನೆ ಪಂಚಾಂಗದ ಮೇಲೆ ಮಲಗಿದ್ದಾಗ ರಾಜಾ ಆತನ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದಾನೆ. ಬಳಿಕ ಅಲ್ಲಿಯೇ ಸಮೀಪದಲ್ಲಿದ್ದ ದಣಿಯ ಮನೆಗೆ ಬಂದು ಮಾಹಿತಿ ನೀಡಿದ್ದು ಆತನನ್ನು ಹಿಡಿದಿಟ್ಟುಕೊಂಡ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಎ. ಕಾಯ್ಕಿಣಿ, ಗಂಗೊಳ್ಳಿ ಠಾಣೆಯ ಪಿಎಸ್ಐ ವಿನಯ್ ಎಂ. ಕೊರ್ಲಹಳ್ಳಿ, ತನಿಖಾ ವಿಭಾಗದ ಪಿಎಸ್ಐ ಜಯಶ್ರೀ ಹೊನ್ನೂರು, ಕೊಲ್ಲೂರು ಠಾಣೆ ತನಿಖಾ ಪಿಎಸ್ಐ ಸುಧಾರಾಣಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ. ಫಾರೆನ್ಸಿಕ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಗಂಗೊಳ್ಳಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದು ಬಂದಿದೆ

You May Also Like
ಕರಾವಳಿ
2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...
Uncategorized
2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...
Uncategorized
2 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...
Uncategorized
1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...