Connect with us

Hi, what are you looking for?

ಕರಾವಳಿ

ಕುಂದಾಪುರ : ಮರಕ್ಕೆ ಡಿಕ್ಕಿ ಹೊಡೆದ ಆಟೋ ರಿಕ್ಷಾ; ಓರ್ವ ಸಾವು

2

ಕುಂದಾಪುರ:ಆಟೋ ರಿಕ್ಷಾ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಸಾವು
ಕುಂದಾಪುರ: ಆಟೋ ರಿಕ್ಷಾ ಚಾಲಕ ಅತೀ ವೇಗದಿಂದ ಚಲಾಯಿಸಿಕೊಂಡುಬಂದು ಒಮ್ಮೇಲೆ ಬ್ರೇಕ್ ಹಾಕಿದ ಪರಿಣಾಮ ರಿಕ್ಷಾ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದಿದ್ದು ಹಿಂಬದಿ ಸವಾರ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು ಸಮೀಪದ ತ್ರಾಸಿ-ಮೊವಾಡಿ ರಸ್ತೆಯಲ್ಲಿ ನಡೆದಿದೆ.

ಕುಂದಾಪುರದ ನಿವಾಸಿ ಭಾಸ್ಕರ (33) ಅಪಘಾತದಲ್ಲಿ ಗಂಭೀರ ಗಾಯಗೊಂಡು ಮೃತಪಟ್ಟ ದುರ್ದೈವಿ.

ಘಟನೆ ವಿವರ: ಭಾನುವಾರ ತಡರಾತ್ರಿ ವೇಳೆಗೆ ತ್ರಾಸಿ ಸಮೀಪದ ಮೊವಾಡಿ-ತ್ರಾಸಿ ಡಾಮಾರು ರಸ್ತೆಯಲ್ಲಿ ರಿಕ್ಷಾ ಚಾಲಕ ಗುರುರಾಜ ಪೂಜಾರಿ ಎನ್ನುವರು ಭಾಸ್ಕರ ಅವರನ್ನು ಕುಳ್ಳೀರಿಸಿಕೊಂಡು ಹೋಗುತ್ತಿದ್ದಾಗ ವೇಗದಲ್ಲಿದ್ದ ರಿಕ್ಷದ ಬ್ರೇಕ್ ಒಮ್ಮೆಲೆ ಹಾಕಿದ್ದು ರಸ್ತೆ ಸಮೀಪದ ತೆಂಗಿನ ಮರಕ್ಕೆ ರಿಕ್ಷಾ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ರಿಕ್ಷಾ ಹಿಂಭಾಗ ಕುಳಿತ ಭಾಸ್ಕರ್ ಅವರಿಗೆ ಗಂಭೀರ ಗಾಯಗಳಾಗಿದ್ದು ಸ್ಥಳೀಯರ ಸಹಕಾರದಲ್ಲಿ ಗಂಗೊಳ್ಳಿ ಆಪತ್ಬಾಂಧವ 24*7 ಅಂಬುಲೆನ್ಸ್ ಮೂಲಕ ಕುಂದಾಪುರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಮೃತಪಟ್ಡಿದ್ದಾರೆ ಎಂದು ತಿಳಿದುಬಂದಿದೆ. ರಿಕ್ಷಾ ಚಾಲಕ ಗುರುರಾಜ ಪೂಜಾರಿ ಅವರಿಗೂ ಗಾಯಗಳಾಗಿದೆ.

ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ...

Uncategorized

0 ಬ್ರಹ್ಮಾವರ : ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದಿಗ್ರಾಮದ ಬೈದ ಬೆಟ್ಟು ಎಂಬಲ್ಲಿ ನಡೆದಿದೆ. ಚಂದ್ರ(39) ಆತ್ಮಹತ್ಯೆ ಮಾಡಿಕೊಂಡವರು. ಚಂದ್ರ ಕಳೆದ 4 ವರ್ಷಗಳ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದರು....

ರಾಜ್ಯ

2 ಸಾಗರ:  ಜೋಗ್ ಫಾಲ್ಸ್ ಪ್ರವಾಸಕ್ಕೆ ಭಾನುವಾರ ತೆರಳಿದ್ದ ಸಾಗರದ ಇಬ್ಬರು ಜೋಗದ ಸಮೀಪದ ದೇವಿಗುಂಡಿ ಬಳಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಸಾಗರದ ಕೃಷಿ ಇಲಾಖೆಯ ಅಧಿಕಾರಿ ಕೆ.ಟಿ. ಕೃಷ್ಣಕುಮಾರ್(36)...

ರಾಷ್ಟ್ರೀಯ

1 ರಾಂಚಿ: ಫುಟ್ಬಾಲ್ ಪಂದ್ಯದ ವೇಳೆ ಸಿಡಿಲು ಬಡಿದು ಇಬ್ಬರು ಮೃತಪಟ್ಟಿರುವ ಘಟನೆ ಜಾರ್ಖಂಡ್‌ನಲ್ಲಿ ವರದಿಯಾಗಿದೆ. ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಸ್ಥಳೀಯ ಫುಟ್‌ಬಾಲ್ ಪಂದ್ಯದ ಆಟದ ಮೈದಾನಕ್ಕೆ ಸಿಡಿಲು ಬಡಿದಿದೆ. ಪರಿಣಾಮ ಇಬ್ಬರು ಪ್ರೇಕ್ಷಕರು...