ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ : ಕಾರೊಂದು ಡಿವೈಡರ್ ದಾಟಿ ಪಲ್ಟಿಯಾಗಿ ಮತ್ತೊಂದು ಕಡೆಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಡಿಕ್ಕಿಯಾದ ಘಟನೆ ಹೆಮ್ಮಾಡಿ ಸಮೀಪದ ಜಾಲಾಡಿ ಎಂಬಲ್ಲಿ ಇಂದು ನಡೆದಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ. ಸ್ವಲ್ಪದರಲ್ಲೇ ದೊಡ್ಡ ಅವಘಡ ತಪ್ಪಿದೆ ಎಂದು ಹೇಳಲಾಗಿದೆ.
ಪಲ್ಟಿಯಾದ ಕಾರು ಮತ್ತೊಂದು ಕಾರಿಗೆ ಢಿಕ್ಕಿಯಾಗಿ, ಕೆಳಕ್ಕಿರುಳುವುದು ತಪ್ಪಿದೆ. ಕೆಳಕ್ಕೆ ಬಿದ್ದಿದ್ದರೆ ಇನ್ನಷ್ಟು ಅನಾಹುತ ಸಂಭವಿಸುವ ಸಾಧ್ಯತೆಯಿತ್ತು. ಕಾರಿನಲ್ಲಿದ್ದವರೆಲ್ಲ ಸಣ್ಣ ಪುಟ್ಟ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪಲ್ಟಿಯಾದ ಕಾರು ಸಿಗಂಧೂರಿನಿಂದ ಬ್ರಹ್ಮಾವರಕ್ಕೆ ಬರುತಿತ್ತು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement. Scroll to continue reading.

