ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದಾಗಿ ಕರಾವಳಿ ಭಾಗದಲ್ಲಿ ಚಂಡಮಾರುತವನ್ನು ಏಳುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.
ಈ ಬೆನ್ನಲ್ಲೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ.
ಈ ಕುರಿತಂತೆ ಟ್ವಿಟ್ ಮಾಡಿರುವ ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆಯು, ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಗುಲ್ಬರ್ಗ, ಹಾಸನ, ರಾಯಚೂರು, ಉಡುಪಿ, ಯಾದಗಿರಿಯ ಪ್ರತ್ಯೇಕ ಸ್ಥಳಗಳಲ್ಲಿ ಮಿಂಚು ಸಹಿತ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.

ಮುಂದಿನ 3 ಗಂಟೆಗಳಲ್ಲಿ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
ಆಗ್ನೇಯ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಚಂಡಮಾರುತ ಏಳಲಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಮೀನುಗಾರರಿಗೆ ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಿ ಆದೇಶಿಸಿದೆ.

