Connect with us

Hi, what are you looking for?

ಕರಾವಳಿ

ವಂಚನೆ ಪ್ರಕರಣ : ಬಂಧನದ ಬಳಿಕ ಚೈತ್ರ ಕುಂದಾಪುರ ಆತ್ಮಹತ್ಯೆಗೆ ಯತ್ನ?

0

ಉಡುಪಿ : ಹಣ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿ ಚೈತ್ರಾ ಕುಂದಾಪುರ ಬಂಧನದ ವೇಳೆ ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿಯಲ್ಲಿ ನಿನ್ನೆ ರಾತ್ರಿ ಸಿಸಿಬಿ ಪೊಲೀಸರು ಬಂಧಿಸಿದ ಬಳಿಕ ಕೈ ಬಳೆ ಒಡೆದು ಉಂಗುರ ನುಂಗಲು ಪ್ರಯತ್ನ ಪಟ್ಟರು ಎನ್ನುವ ಮಾಹಿತಿ ಲಭ್ಯವಾಗಿದೆ.

ಇಂದು ಸಂಜೆ ಚೈತ್ರಾ ಕುಂದಾಪುರ ಅವರನ್ನು ಜಡ್ಜ್ ಮುಂದೆ ಹಾಜರುಪಡಿಸಲಾಗುತ್ತದೆ. ಇದಕ್ಕಾಗಿ ಚೈತ್ರಾ ಕುಂದಾಪುರ ಅವರನ್ನು ಸಿಸಿಬಿ ಪೊಲೀಸರು ಬೆಂಗಳೂರಿಗೆ ಕರೆದುಕೊಂಡು ಬರುತ್ತಿದ್ದಾರೆ.

ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಹಿಂದೂಪರ ವಾಗ್ಮಿ ಚೈತ್ರಾ ಕುಂದಾಪುರ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಅವರನ್ನು ನಿನ್ನೆ ರಾತ್ರಿ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement. Scroll to continue reading.

ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಗೆ ಸುಮಾರು ಏಳು ಕೋಟಿ ರೂಪಾಯಿಯನ್ನು ಚೈತ್ರಾ ಕುಂದಾಪುರ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಕೇಂದ್ರದ ನಾಯಕರು, ಆರೆಸ್ಸೆಸ್ ಪ್ರಮುಖರ ಹೆಸರಿನಲ್ಲಿ ಟಿಕೆಟ್ ಕೊಡಿಸುವುದಾಗಿ ಹೇಳಿ ಈಕೆಯೊಂದಿಗೆ ನಾಲ್ಕೈದು ಜನರ ತಂಡ . ಬೈಂದೂರು ಬಿಜೆಪಿಯ ಟಿಕೆಟ್ ಪಕ್ಕ ಮಾಡಿಕೊಡುವುದಾಗಿ ನಂಬಿಸಿದ್ದ ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ ನಾಯಕ್, ಪ್ರಸಾದ್ ಸದ್ಯ ಪೊಲೀಸರ ವಶದಲ್ಲಿ ಇದ್ದಾರೆ.

ಚೈತ್ರಾ ಕುಂದಾಪುರ ಅವರು ಗೋವಿಂದಬಾಬು ಪೂಜಾರಿ ಎಂಬುವವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿದ್ದರು. ಇದನ್ನು ನಂಬಿದ ಗೋವಿಂದಬಾಬು ಪೂಜಾರಿಯವರು ಚೈತ್ರಾ ಕುಂದಾಪುರ ಹೇಳಿದಂತೆ ಆಗಾಗ ಬೆಂಗಳೂರಿಗೆ ಬರುತ್ತಿದ್ದರು.

ಗೋವಿಂದಬಾಬು ಬೆಂಗಳೂರಿಗೆ ಬಂದಾಗಲೆಲ್ಲಾ, ಚೈತ್ರಾ ಕುಂದಾಪುರ ತನ್ನ ಪರಿಚಯಸ್ತರಿಗೆ ಒಳ್ಳೆ ಬಟ್ಟೆ ಹಾಕಿಸಿ, ಇವರೇ ಹೈಕಮಾಂಡ್ ನಾಯಕರು ಎಂದು ನಂಬಿಸುತ್ತಿದ್ದರು. ಇವರು ಹೇಳಿದ ಮೇಲೆ ಟಿಕೆಟ್ ನಿಮಗೆ ಸಿಗುತ್ತದೆ ಎಂದು ಹೇಳಿದ್ದರು.

Advertisement. Scroll to continue reading.

ಇದನ್ನು ನಂಬಿದ ಗೋವಿಂದಬಾಬು ಪೂಜಾರಿ ಅವರು ಟಿಕೆಟ್ ಸಿಗುತ್ತೆ ಅನ್ನುವ ಆಸೆಗೆ ಕೇಳಿದಷ್ಟು ಹಣ ಕೊಟ್ಟಿದ್ದರು.

ಗೋವಿಂದಬಾಬು ಅವರ ಬಳಿಯಿಂದ ಚೈತ್ರಾ ಕುಂದಾಪುರ ಒಟ್ಟು ನಾಲ್ಕು ಕೋಟಿ ರೂಪಾಯಿ ಹಣ ಪಡೆದಿದ್ದರು. ಆದರೆ, ಗೋವಿಂದಬಾಬು ಪೂಜಾರಿ ಅವರಿಗೆ ಟಿಕೆಟ್ ಸಿಗಲಿಲ್ಲ. ಬಳಿಕ ಗೋವಿಂದಬಾಬು ಪೂಜಾರಿ ಅವರು ದೂರು ದಾಖಲಿಸಿದ್ದಾರೆ.

ಸದ್ಯ, ದೂರಿನ ಆಧಾರದ ಮೇಲೆ ಸದ್ಯ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ‍‌‌ಹಾವಂಜೆ : ಇಲ್ಲಿನ ಅಂಗಡಿಬೆಟ್ಟುವಿನ ಕಪ್ಪೆಟ್ಟು ಪ್ರಸಾದ್ ಶೆಟ್ಟಿ ಅವರ ಮನೆಯ ಕಂಪೌಂಡ್‌ಗೆ ತಾಗಿ ರಸ್ತೆಯ ಮಧ್ಯದಲ್ಲಿ ಹೊಂಡವೊಂದು ಕಳೆದ ಒಂದು ತಿಂಗಳ ಹಿಂದೆಯೇ ಕಂಡುಬಂದಿದ್ದರೂ ಪ್ರಮುಖ ರಸ್ತೆ ಯಾಗಿರುವುದರಿಂದ, ಸ್ಥಳೀಯ...

ಕರಾವಳಿ

0 ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ...

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು...

Uncategorized

0 ಬ್ರಹ್ಮಾವರ : ವಿಷ ಸೇವಿಸಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುದಿಗ್ರಾಮದ ಬೈದ ಬೆಟ್ಟು ಎಂಬಲ್ಲಿ ನಡೆದಿದೆ. ಚಂದ್ರ(39) ಆತ್ಮಹತ್ಯೆ ಮಾಡಿಕೊಂಡವರು. ಚಂದ್ರ ಕಳೆದ 4 ವರ್ಷಗಳ ಹಿಂದೆ ಪತ್ನಿಯನ್ನು ಕಳೆದುಕೊಂಡಿದ್ದರು....