ಲಿಬಿಯಾ: ಭಾರೀ ಚಂಡಮಾರುತ ಮತ್ತು ಮಳೆಯ ಪರಿಣಾಮ ಡರ್ನಾ ನಗರ ಪ್ರವಾಹದಿಂದ ಮುಳುಗಿ ಹೋಗಿದೆ. ಕನಿಷ್ಠ 5,300 ಜನರು ಸಾವನ್ನಪ್ಪಿದ್ದಾರೆ ಮತ್ತು 10,000 ಕ್ಕೂ ಹೆಚ್ಚು ಜನರು ಕಾಣೆಯಾಗಿದ್ದಾರೆ ಎಂದು ಪೂರ್ವ ಲಿಬಿಯಾದ ಅಧಿಕಾರಿಗಳು ತಿಳಿಸಿದ್ದಾರೆ.
ಇದರಿಂದ ಕರಾವಳಿಯ ನಗರವಾದ ಪೆರ್ನಾ ಅತ್ಯಂತ ಹೆಚ್ಚು ಹಾನಿಗೊಳಾಗಿದೆ. ಇಡೀ ನಗರವನ್ನು ವಿಪತ್ತು ಪ್ರದೇಶ ಎಂದು ಘೋಷಿಸಲಾಗಿದೆ.
ಪೂರ್ವ ಲಿಬಿಯಾದ ರಕ್ಷಣಾ ಪಡೆಗಳು ಕರಾವಳಿ ನಗರದಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ 1,000 ಕ್ಕೂ ಹೆಚ್ಚು ಶವಗಳನ್ನು ಹೊರಗೆ ತೆಗೆದಿದ್ದಾರೆ. ಮುಂಬರುವ ದಿನಗಳಲ್ಲಿ ಸಾವಿನ ಸಂಖ್ಯೆ ಸಾವಿರದಲ್ಲಿ ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಇಂಟರ್ನ್ಯಾಷನಲ್ ಫೆಡರೇಶನ್ ಆಫ್ ರೆಡ್ ಕ್ರಾಸ್ ಮತ್ತು ರೆಡ್ ಕ್ರೆಸೆಂಟ್ ಸೊಸೈಟೀಸ್ (ಐಎಫ್‌ಆರ್‌ಸಿ) ಲಿಬಿಯಾ ರಾಯಭಾರಿ ಮಾಹಿತಿ ನೀಡಿದೆ.
Advertisement. Scroll to continue reading.

ಪ್ರವಾಹದ ಸಂತ್ರಸ್ತರಿಗೆ ಸಹಾಯ ಮಾಡುವಾಗ ಮೂವರು ಐಎಫ್‌ಆರ್‌ಸಿ ಸ್ವಯಂಸೇವಕರು ಸಾವನ್ನಪ್ಪಿದ್ದಾರೆ.