ಉಡುಪಿ : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಗೆ 7 ಕೋಟಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಆರೋಪಿ ಚನ್ನ ನಾಯಕನನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ.
ಬೆಂಗಳೂರಿನ ಯಶವಂತಪುರ ಬಳಿ ಸಿಸಿಬಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಎಂದು ಚನ್ನಾ ನಾಯಕ್ ನಟಿಸಿದ್ದ ಎಂಬ ಆರೋಪ ಕೇಳಿ ಬಂದಿದೆ.
Advertisement. Scroll to continue reading.

ಎಂ ಎಲ್ ಎ ಟಿಕೆಟ್ ಕೊಡಿಸುವುದಾಗಿ ಬೈಂದೂರು ಮೂಲದ ಖ್ಯಾತ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ 7 ಕೋಟಿ ಹಣ ಪಡೆದು ವಂಚಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಗೋವಿಂದ ಬಾಬು ಪೂಜಾರಿ ಅವರು ಪ್ರಕರಣ ದಾಖಲಿಸಿದ್ದು, ಚೈತ್ರ ಕುಂದಾಪುರ ಹಾಗೂ ಆಕೆಯ ಸಹಚರರನ್ನು ಸಿಸಿಬಿ ವಶಕ್ಕೆ ಪಡೆದಿದೆ.
Advertisement. Scroll to continue reading.

In this article:arrest, CCB, Chaithra Kundapura, Featured, fraud case, govinda babu Poojary

Click to comment