ಬೆಂಗಳೂರು : ಉದ್ಯಮಿಯೊಬ್ಬರಿಗೆ ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಚೈತ್ರಾ ಕುಂದಾಪುರ ಅವರು ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿರುವ ಆರೋಪದ ಅಡಿಯಲ್ಲಿ ಸಿಸಿಬಿ ಅಧಿಕಾರಿಗಳು ಬಂದಿಸಿದ್ದಾರೆ.
ಏಕಾಏಕಿ ಸಿಸಿಬಿ ಕಚೇರಿಯಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ಸಿಸಿಬಿ ಕಚೇರಿಯಲ್ಲಿ ಚೈತ್ರಾ ಕುಂದಾಪುರ ಕುಸಿದು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಮಹಿಳಾ ಸಾಂತ್ವನ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆದುಕೊಂಡು ಬರಲಾಗಿದ್ದು, ಏಕಾಏಕಿ ಚೈತ್ರಾ ಕುಂದಾಪುರ ಕುಸಿದು ಬಿದಿದ್ದು, ಪ್ರಾಥಮಿಕವಾಗಿ ಚೈತ್ರಾ ಕುಂದಾಪುರ ಅವರು ಮೂರ್ಛೆ ರೋಗದಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರಿಂದ ತಿಳಿದು ಬಂದಿದೆ. ಸದ್ಯ ವಿಕ್ಟೋರಿಯಾ ಐಸಿಯು ನಲ್ಲಿ ಚೈತ್ರಾ ಕುಂದಾಪುರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಆರೋಪಿ ಚೈತ್ರಾ ಕುಂದಾಪುರ ಅವರನ್ನು ಸೆ.23 ರವರೆಗೆ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವಂತೆ ನ್ಯಾಯಾಲಯ ಆದೇಶ ನೀಡಿತ್ತು. ಅದರಂತೆ ಗುರುವಾರದಿಂದ ಸಿಸಿಬಿ ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ.

