ಜಮ್ಮು ಮತ್ತು ಕಾಶ್ಮೀರ : ಅನಂತನಾಗ್ ಜಿಲ್ಲೆಯಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಗುಂಡಿನ ಕಾಳಗ ಮೂರನೇ ದಿನವೂ ಮುಂದುವರಿದಿದೆ. ಶುಕ್ರವಾರ ಭಾರತೀಯ ಸೇನೆಯ ಮತ್ತೊಬ್ಬ ಯೋಧ ಹುತಾತ್ಮರಾಗಿದ್ದಾರೆ.
ಸೈನಿಕರು ಡ್ರೋನ್‌ಗಳನ್ನು ಬಳಸಿ ಶಂಕಿತ ಭಯೋತ್ಪಾದಕರ ಅಡಗುತಾಣದ ಸ್ಥಳಗಳ ಮೇಲೆ ಗ್ರೆನೇಡ್ ದಾಳಿ ನಡೆಸುತ್ತಾರೆ. ಈ ಪ್ರದೇಶದಲ್ಲಿ ಅಡಗಿರುವ ಭಯೋತ್ಪಾದಕರ ಗುಂಪನ್ನು ಗುರಿಯಾಗಿಸಲು ಸೈನಿಕರು ಗ್ರೆನೇಡ್ ಲಾಂಚರ್‌ಗಳನ್ನು ಸಹ ಬಳಸುತ್ತಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement. Scroll to continue reading.

ಬುಧವಾರ ಭದ್ರತಾ ಪಡೆ ಸಿಬ್ಬಂದಿ ಮತ್ತು ಉಗ್ರರ ನಡುವೆ ನಡೆದ ಎರಡು ಪ್ರತ್ಯೇಕ ಗುಂಡಿನ ಕಾಳಗಗಳಲ್ಲಿ ಕರ್ನಲ್ ಮನ್ ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋನ್ ಚಾಕ್ ಹಾಗೂ ಡಿಎಸ್ಪಿ ಹುಮಾಯೂನ್ ಭಟ್ ಸೇರಿದಂತೆ ನಾಲ್ವರು ಅಧಿಕಾರಿಗಳು ಸಾವನ್ನಪ್ಪಿದ್ದಾರೆ. ಶುಕ್ರವಾರ ಹುತಾತ್ಮರಾದ ನಾಲ್ಕನೇ ಯೋಧನ ಗುರುತು ಇನ್ನೂ ಬಹಿರಂಗವಾಗಿಲ್ಲ.
In this article:ananth nag district, death, encounter, Jammu and Kashmir, soldier death, terrorist attack

Click to comment