ಬೆಂಗಳೂರು : ಗಣೇಶ ಚತುರ್ಥಿ ಹಿನ್ನೆಲೆ ರಾಜ್ಯದಾದ್ಯಂತ ಸೆಪ್ಟಂಬರ್ 18 ರಂದು ಸಾರ್ವತ್ರಿಕ ರಜೆ ಇರಲಿದೆ. ಆದರೆ, ಕರಾವಳಿ ಭಾಗದಲ್ಲಿ ಸೆಪ್ಟಂಬರ್ 19 ರಂದು ಗಣೇಶನ ಹಬ್ಬವನ್ನು ಆಚರಿಸಲಾಗುವುದು.
ಹೀಗಾಗಿ, ಗಣೇಶ ಚತುರ್ಥಿಗೆ ಸಾರ್ವತ್ರಿಕ ರಜೆಯನ್ನು ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲಿ ಸೆಪ್ಟೆಂಬರ್ 18ರ (ಸೋಮವಾರ) ಬದಲು ಸೆಪ್ಟೆಂಬರ್ 19 (ಮಂಗಳವಾರ) ರಂದು ರಜೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ದಿನಾಂಕ:18.09.2023 ರಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯದಾದ್ಯಂತ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದೆ.ಬದಲಿಗೆ ಮುಂದುವರೆದು, ಉಡುಪಿ ಜಿಲ್ಲೆಗೆ ಅನ್ವಯಿಸುವಂತೆ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ದಿನಾಂಕ:18.09.2023ರ ಬದಲಿಗೆ ದಿನಾಂಕ:19.09.2023ರಂದು ಸಾರ್ವತ್ರಿಕ ರಜೆ ಘೋಷಿಸಲು ತಮ್ಮ ಹಂತದಲ್ಲಿಯೇ ತೀರ್ಮಾನ ತೆಗೆದುಕೊಳ್ಳುವಂತೆ ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಅಂತ ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.

ಇನ್ನೊಂದು ಆದೇಶ ಪತ್ರದಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಸಾರ್ವತ್ರಿಕ ರಜೆಯನ್ನು ದಿ:18.09.2023 ರ ಬದಲಾಗಿ ದಿ:19.09.2023 ರಂದು ನೀಡುವ ಕುರಿತು ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯಿಸುವಂತೆ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಜಿಲ್ಲಾಧಿಕಾರಿಗಳು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ದಿನಾಂಕ:18.09.2023ರ ಬದಲಿಗೆ ದಿನಾಂಕ:19.09.2023ರಂದು ಸಾರ್ವತ್ರಿಕ ರಜೆ ಘೋಷಿಸಲು ತಮ್ಮ ಹಂತದಲ್ಲಿಯೇ ತೀರ್ಮಾನ ತೆಗೆದುಕೊಳ್ಳುವಂತೆ ಕೋರಲು ನಿರ್ದೇಶಿಸಲ್ಪಟ್ಟಿದ್ದೇನೆ ಎಂದು ತಿಳಿಸಲಾಗಿದೆ.
