ನವದೆಹಲಿ: ಇಂದು ಪ್ರಧಾನಿ ಮೋದಿ ಅವರ 73ನೇ ಜನ್ಮದಿನ. ಈ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೋದಿ ಹುಟ್ಟುಹಬ್ಬಕ್ಕೆ ಶುಭಾಶಯಗಳನ್ನು ತಿಳಿಸಿದ್ದಾರೆ.
‘X’ನಲ್ಲಿ ಮುರ್ಮು ಸಂದೇಶ ರವಾನಿಸಿದ್ದು, “ಪ್ರಧಾನಿ ಮೋದಿ ಅವರ ಜನ್ಮದಿನದಂದು ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು” ಎಂದು ಬರೆದುಕೊಂಡಿದ್ದಾರೆ.
“ನಿಮ್ಮ ದೂರಗಾಮಿ ದೃಷ್ಟಿಕೋನ ಮತ್ತು ಬಲವಾದ ನಾಯಕತ್ವದಿಂದ ನೀವು ಭಾರತದ ಸಮಗ್ರ ಅಭಿವೃದ್ಧಿಗೆ ದಾರಿ ಮಾಡಿಕೊಡಲಿ. ನೀವು ಯಾವಾಗಲೂ ಮುನ್ನಡೆಯಿರಿ. ಸಂತೋಷ ಮತ್ತು ಆರೋಗ್ಯಕರ ಜೀವನ ಮತ್ತು ನಿಮ್ಮ ಅದ್ಭುತ ನಾಯಕತ್ವದಿಂದ ದೇಶವಾಸಿಗಳಿಗೆ ಒಳ್ಳೆಯದಾಗಲಿ” ಎಂದು ಅವರು ಶುಭ ಹಾರೈಸಿದ್ದಾರೆ.

भारत के प्रधानमंत्री श्री @narendramodi जी को जन्मदिन की हार्दिक बधाई और शुभकामनाएं। मेरी शुभेच्छा है कि अपनी दूरगामी दृष्टि तथा सुदृढ़ नेतृत्व से आप ‘अमृत काल’ में भारत के समग्र विकास का मार्ग प्रशस्त करें। मेरी ईश्वर से प्रार्थना है कि आप सदा स्वस्थ और सानंद रहें तथा देशवासियों…— President of India (@rashtrapatibhvn) September 17, 2023