ಕೊಲಂಬೊ: ಏಷ್ಯಾ ಕಪ್ 2023 ಫೈನಲ್ ಪಂದ್ಯದಲ್ಲಿ ಭಾರತಕ್ಕೆ ಶ್ರೀಲಂಕಾ ತಂಡವು ಕೇವಲ 51 ರನ್‌ಗಳ ಗುರಿ ನೀಡಿದೆ.
ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.
ಮೊದಲ ಓವರ್‌ನ ಮೂರನೇ ಎಸೆತದಲ್ಲಿ ಕುಸಲ್ ಪೆರೆರಾ ಅವರನ್ನು ಔಟ್ ಮಾಡುವ ಮೂಲಕ ಜಸ್ಪ್ರೀತ್ ಬುಮ್ರಾ ಶ್ರೀಲಂಕಾಕ್ಕೆ ದೊಡ್ಡ ಹೊಡೆತ ನೀಡಿದರು. ಬಳಿಕ, ಸಿರಾಜ್ ಅವರು ತಮ್ಮ ಮೊದಲ ಓವರ್‌ನಲ್ಲಿ ಮೇಡನ್ ಪಡೆದರು. ನಂತರದ ಓವರ್‌ನಲ್ಲಿ ಅವರು ನಾಲ್ಕು ವಿಕೆಟ್‌ಗಳನ್ನು ಪಡೆಯುವ ಮೂಲಕ ಶ್ರೀಲಂಕಾ ಅಲ್ಲ ಮಾತ್ರಕ್ಕೆ ಕುಸಿಯುವಂತೆ ಮಾಡಿದ್ದಾರೆ.

ಮೊಹಮ್ಮದ್ ಸಿರಾಜ್ ಅವರು ತಮ್ಮ ಎರಡನೇ ಓವರ್‌ನ ಮೊದಲ ಎಸೆತದಲ್ಲಿ ರವೀಂದ್ರ ಜಡೇಜಾಗೆ ಪಾಥುಮ್ ನಿಸ್ಸಾಂಕ ಕ್ಯಾಚ್ ನೀಡಿದರು. ಇದಾದ ಬಳಿಕ ಮೂರನೇ ಎಸೆತದಲ್ಲಿ ಸದಿರಾ ಔಟಾದರು. ಅಸಲಂಕಾ ನಾಲ್ಕನೇ ಎಸೆತದಲ್ಲಿ ಪೆವಿಲಿಯನ್‌ಗೆ ಮರಳಿದರು. ಸಿರಾಜ್ ಹ್ಯಾಟ್ರಿಕ್ ಮಿಸ್ ಆದರೆ ಕೊನೆಯ ಎಸೆತದಲ್ಲಿ ಧನಂಜಯ್ ಔಟ್ ಆಗುವ ಮೂಲಕ ನಾಲ್ಕನೇ ವಿಕೆಟ್ ಪಡೆದರು.
ಸದ್ಯ ಶ್ರೀಲಂಕಾ ಎಲ್ಲಾ ವಿಕೆಟ್ ನಷ್ಟಕ್ಕೆ ಪ್ರಯಾಸ ಪಟ್ಟುಕೊಂಡು 50 ರನ್ ಕಲೆ ಹಾಕಿದೆ.
ಭಾರತ ಗುರಿ ಮುಟ್ಟಿ ಏಷ್ಯಾಕಪ್ ತನ್ನದಾಗಿಸಿಕೊಳ್ಳಬೇಕಿದೆ.
ಹೊಸ ದಾಖಲೆ ಬರೆದ ಸಿರಾಜ್ :

ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಫೈನಲ್‌ನಲ್ಲಿ ಮೊಹಮ್ಮದ್ ಸಿರಾಜ್ ಇತಿಹಾಸ ನಿರ್ಮಿಸಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂದೇ ಓವರ್‌ನಲ್ಲಿ 4 ವಿಕೆಟ್ ಪಡೆದ ಭಾರತದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಏಷ್ಯಾಕಪ್ 2023 ರ ಶ್ರೀಲಂಕಾ ವಿರುದ್ಧದ ಫೈನಲ್‌ನಲ್ಲಿ, ಮೊಹಮ್ಮದ್ ಸಿರಾಜ್ ಕೇವಲ 15 ಎಸೆತಗಳಲ್ಲಿ 5 ವಿಕೆಟ್‌ಗಳನ್ನು ಪಡೆದಿರುವುದು ದಾಖಲೆಯಾಗಿದೆ.
ಈ ಮೂಲಕ ಮೊಹಮ್ಮದ್ ಸಿರಾಜ್ ವೇಗವಾಗಿ 50 ವಿಕೆಟ್ ಪಡೆದ ನಾಲ್ಕನೇ ಭಾರತೀಯ ಆಟಗಾರನಾಗಿ ಹೊರಹೊಮ್ಮಿದ್ದಾರೆ.

