Connect with us

Hi, what are you looking for?

ಅಂತಾರಾಷ್ಟ್ರೀಯ

ಭಾರತ ಚಂದ್ರನನ್ನು ತಲುಪಿದೆ, ಆದರೆ ನಾವು ಭಿಕ್ಷೆ ಬೇಡುತ್ತಿದ್ದೇವೆ : ಪಾಕ್‌ ಮಾಜಿ ಪ್ರಧಾನಿ ನವಾಜ್‌ ಷರೀಫ್‌

0

ಲಾಹೋರ್: ಭಾರತ ಚಂದ್ರನನ್ನು ತಲುಪಿ, ಜಿ20 ಶೃಂಗಸಭೆಯನ್ನು ಆಯೋಜಿಸಿರುವಾಗ ನಮ್ಮ ದೇಶ ವಿಶ್ವದ ಮುಂದೆ ಹಣ ಭಿಕ್ಷೆ ಬೇಡುತ್ತಿದೆ.

ಇಡೀ ದೇಶ 600 ಬಿಲಿಯನ್‌ ಡಾಲರ್‌ಗಳ ದೊಡ್ಡ ಖಜಾನೆಯನ್ನು ಹೊಂದಿದೆ. ಆದರೆ, ಪಾಕಿಸ್ತಾನ ಮಾತ್ರ ಚೀನಾ ಹಾಗೂ ಅರಬ್‌ ದೇಶಗಳು ಸೇರಿದಂತೆ ಪ್ರಪಂಚದ ಶ್ರೀಮಂತ ದೇಶಗಳ ಮುಂದೆ ಒಂದೊಂದು ಪೈಸೆ ಡಾಲರ್‌ಗಳನ್ನು ಭಿಕ್ಷೆ ಬೇಡುವ ಸ್ಥಿತಿಗೆ ಬಂದಿದ್ದೇವೆ. ಹೀಗಿರುವಾಗ ಅವರ ಮುಂದೆ ನಮಗೆ ಯಾವ ಗೌರವ ಸಿಗುತ್ತದೆ. ನಾವು ಸಂಪೂರ್ಣವಾಗಿ ಬಡವರಾಗುವ ಸನಿಹದಲ್ಲಿದ್ದೇವೆ ಎಂದು ಪಾಕ್ ಮಾಜಿ ಪ್ರಧಾನಿ ನವಾಜ್ ಷರೀಫ್ ಹೇಳಿದ್ದಾರೆ.

ಅಲ್ಲದೆ ಪಾಕಿಸ್ತಾನದ ಅದರ ಆರ್ಥಿಕ ಸಮಸ್ಯೆಗಳಿಗೆ ದೇಶದ ಮಾಜಿ ಜನರಲ್‌ಗಳು ಮತ್ತು ನ್ಯಾಯಾಧೀಶರನ್ನು ದೂಷಿಸಿದ್ದಾರೆ.

Advertisement. Scroll to continue reading.

ಪಾಕಿಸ್ತಾನದ ಆರ್ಥಿಕತೆಯು ಕಳೆದ ಹಲವು ವರ್ಷಗಳಿಂದ ಪತನದತ್ತ ಸಾಗುತ್ತಿದೆ. ಅನಿಯಂತ್ರಿತ ಎರಡಂಕಿಯ ಹಣದುಬ್ಬರದಿಂದ ಜನಸಾಮಾನ್ಯರ ತತ್ತರಿಸಿ ಹೋಗಿದ್ದಾರೆ ಎಂದು ತಮ್ಮ ದೇಶದ ವಿರುದ್ಧವೇ ವಾಗ್ದಾಳಿ ನಡೆಸಿದ್ದಾರೆ.

ಸೋಮವಾರ ಸಂಜೆ ಲಂಡನ್‌ನಿಂದ ವೀಡಿಯೊ ಲಿಂಕ್ ಮೂಲಕ ಲಾಹೋರ್‌ನ ಪಕ್ಷದ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಮಾಜಿ ಪ್ರಧಾನಿ ಷರೀಫ್, “ಭಾರತ ಚಂದ್ರನನ್ನು ತಲುಪಿ ಜಿ20 ಶೃಂಗಸಭೆಯನ್ನು ಬಹಳ ಯಶಸ್ವಿಯಾಗಿ ನಡೆಸಿದೆ. ಇಂದು ಪಾಕಿಸ್ತಾನದ ಪ್ರಧಾನಿ ಹಣಕ್ಕಾಗಿ ಪ್ರಪಂಚದ ಶ್ರೀಮಂತ ದೇಶಗಳ ಮುಂದೆ ಭಿಕ್ಷೆ ಬೇಡುತ್ತಿದ್ದಾರೆ. ಭಾರತ ಮಾಡಿದ ಸಾಧನೆಯನ್ನು ಪಾಕಿಸ್ತಾನಕ್ಕೆ ಸಾಧಿಸಲು ಏಕೆ ಸಾಧ್ಯವಾಗಲಿಲ್ಲ? ಇದಕ್ಕೆ  ಯಾರು ಹೊಣೆ?” ಎಂದು ಪ್ರಶ್ನಿಸಿದರು.

ಭಾರತ ಇಂದು ಎಲ್ಲಿಗೆ ತಲುಪಿದೆ? ಪಾಕಿಸ್ತಾನ ಭಿಕ್ಷಾಟನೆಯಿಂದ ಎಲ್ಲಿದೆ?

ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) ಪಕ್ಷದ 73 ವರ್ಷದ ಸರ್ವೋಚ್ಚ ನಾಯಕ ಷರೀಫ್ ಅವರು, 1990 ರಲ್ಲಿ ತಮ್ಮ ಸರ್ಕಾರ ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳನ್ನು ಭಾರತ ಅನುಸರಿಸಿದೆ ಎಂದು ಹೇಳಿದ್ದಾರೆ.

Advertisement. Scroll to continue reading.

ಅಟಲ್ ಬಿಹಾರಿ ವಾಜಪೇಯಿ ಅವರು ಭಾರತದ ಪ್ರಧಾನಿಯಾದಾಗ ಭಾರತದ ವಿದೇಶಿ ವಿನಿಮಯ ಕೇವಲ ಒಂದು ಶತಕೋಟಿ ಡಾಲರ್‌ಗಳಷ್ಟಿತ್ತು. ಆದರೆ ಈಗ ಅದು 600 ಶತಕೋಟಿ ಡಾಲರ್‌ಗೆ ಏರಿದೆ. ಭಾರತ ಇಂದು ಎಲ್ಲಿಗೆ ತಲುಪಿದೆ? ಪಾಕಿಸ್ತಾನ ಭಿಕ್ಷಾಟನೆಯಿಂದ ಎಲ್ಲಿದೆ? ಎಂದು ಪ್ರಶ್ನಿಸಿದರು.

ನಿವೃತ್ತ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ, ಮಾಜಿ ಐಎಸ್ಐ ಮುಖ್ಯಸ್ಥ ಫೈಜ್ ಹಮೀದ್ ಮತ್ತು ಮಾಜಿ ಮುಖ್ಯ ನ್ಯಾಯಮೂರ್ತಿ ಮಿಯಾನ್ ಸಾಕಿಬ್ ನಿಸಾರ್ ಅವರು ಪಾಕಿಸ್ತಾನದ ಈ ಸ್ಥಿತಿಗೆ ಕಾರಣ ಎಂದು ನವಾಜ್ ಷರೀಫ್ ದೂರಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕ್ರೀಡೆ

1 ಚೀನಾ : ಹಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟಲ್ಲಿ ಭಾರತಕ್ಕೆ ಮೊದಲ ಚಿನ್ನ ಬಂದಿದೆ. ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಏರ್ ರೈಫಲ್ ಶೂಟಿಂಗ್ ತಂಡ ಚಿನ್ನದ ಪದಕ ಗೆದ್ದಿದೆ. 10...

ಕರಾವಳಿ

0 ‍‌‌ಹಾವಂಜೆ : ಇಲ್ಲಿನ ಅಂಗಡಿಬೆಟ್ಟುವಿನ ಕಪ್ಪೆಟ್ಟು ಪ್ರಸಾದ್ ಶೆಟ್ಟಿ ಅವರ ಮನೆಯ ಕಂಪೌಂಡ್‌ಗೆ ತಾಗಿ ರಸ್ತೆಯ ಮಧ್ಯದಲ್ಲಿ ಹೊಂಡವೊಂದು ಕಳೆದ ಒಂದು ತಿಂಗಳ ಹಿಂದೆಯೇ ಕಂಡುಬಂದಿದ್ದರೂ ಪ್ರಮುಖ ರಸ್ತೆ ಯಾಗಿರುವುದರಿಂದ, ಸ್ಥಳೀಯ...

ಕರಾವಳಿ

0 ಬೆಳ್ತಂಗಡಿ: ಮನೆಯ ಸಮೀಪದಲ್ಲಿದ್ದ ಮರವನ್ನು ಕಡಿಯುವ ವೇಳೆ ಆಕಸ್ಮಿಕವಾಗಿ ಮೈ ಮೇಲೆ ಮರ ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ನಿಡ್ಲೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಿಡ್ಲೆ...

ಕರಾವಳಿ

0 ಉಡುಪಿ : ಉಡುಪಿ ಜಿಲ್ಲೆಯಲ್ಲಿರುವ ವಿಕಲಚೇತನರು ಮತ್ತು ಹಿರಿಯ ನಾಗರೀಕರ ಕುರಿತಂತೆ ವ್ಯವಸ್ಥಿತವಾಗಿ ಸಮಗ್ರ ನಡೆಸಿ, ಅವರಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಾಧನ ಸಲಕರಣಗಳನ್ನು ಅಲಿಂಕೋ ಮೂಲಕ ಸಂಪೂರ್ಣ ಉಚಿತವಾಗಿ ವಿತರಿಸಲಾಗುವುದು...