ಉಡುಪಿ : ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್ ನ್ನು ಕಂಟೈನ್ಮೆಂಟ್ ವಲಯವೆಂದು ಉಡುಪಿ ಜಿಲ್ಲಾಡಳಿತ ಘೋಷಿಸಿದೆ. ಒಂದೇ ವಾರದಲ್ಲಿ ಇಲ್ಲಿ 86 ಪ್ರಕರಣಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಮಾರ್ಚ್ 17 ರಂದು ಉಡುಪಿ ಜಿಲ್ಲೆಯಲ್ಲಿ ಒಟ್ಟು 33 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಅದರಲ್ಲೂ ಮಣಿಪಾಲದ ಎಂಐಟಿಯಲ್ಲಿ 27 ಪ್ರಕರಣಗಳು ಪತ್ತೆಯಾಗಿವೆ.
ಎಂಐಟಿ ಕ್ಯಾಂಪಸ್ ನಲ್ಲಿ ಹೊರರಾಜ್ಯದ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಪ್ರಾಥಮಿಕ ಸಂಪರ್ಕಿತರಲ್ಲೂ ಕೊರೋನಾ ಸೋಂಕು ದೃಢಪಟ್ಟಿದೆ. ಹಾಗಾಗಿ ಸೋಂಕು ಹಬ್ಬದಂತೆ ಎಂಐಟಿ ಕ್ಯಾಂಪಸ್ ನ್ನು ಕಂಟೈನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.