Connect with us

Hi, what are you looking for?

Diksoochi News

Uncategorized

ಉಡುಪಿ : ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಜನ್ಮ ದಿನಾಚರಣೆ

0

ಉಡುಪಿ : ಜಿಲ್ಲಾಡಳಿತ, ಜಿಪಂ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪ.ಜಾತಿ ಮತ್ತು ಪ.ಪಂಗಡಗಳ ಸಂಘಟನೆ ಉಡುಪಿ ಜಿಲ್ಲೆ ಇದರ ಸಹಯೋಗದಲ್ಲಿ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡಾ.ಬಾಬು ಜಗಜೀವನರಾಂ ಅವರ 114ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ
ಡಾ.ಬಾಬು ಜಗಜೀವನರಾಂರ ಭಾವಚಿತ್ರಕ್ಕೆ ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಪುಷ್ಪಾರ್ಚನೆ ಸಲ್ಲಿಸಿದರು.

ಬಳಿಕ ಮಾತನಾಡಿದ ಅವರು,ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಅವರು ಕೇವಲ
ಸ್ವಾತಂತ್ರ ಹೋರಾಟಗಾರರಷ್ಟೇ ಅಲ್ಲದೇ ಸಮಾಜ ಸೇವಕರೂ ಆಗಿದ್ದರು. ಅಂತಹ ಮಹಾನ್ ವ್ಯಕ್ತಿಯ ಜೀವನ ಚರಿತ್ರೆಯನ್ನು ತಿಳಿದುಕೊಂಡು ಅವರ ತತ್ವ ಸಿದ್ಧಾಂತವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.

ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ಡಾ.ಬಾಬು ಜಗಜೀವನರಾಂ ಜೀವನಚರಿತ್ರೆ ಬಗ್ಗೆ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ನವೀನ್ ಭಟ್ ವೈ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ್‌ಚಂದ್ರ, ಜಿಲ್ಲೆಯ ಪರಿಶಿಷ್ಟ ಜಾತಿ, ಪಂಗಡ ಸಂಘಟನೆಗಳ ಪದಾಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಅನಿತಾ ಮಡ್ಲೂರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!