Connect with us

Hi, what are you looking for?

Diksoochi News

Uncategorized

ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ನಿಧನ

0

ನವದೆಹಲಿ : ಸಿಬಿಐ ಮಾಜಿ ನಿರ್ದೇಶಕ ರಂಜಿತ್ ಸಿನ್ಹಾ ಶುಕ್ರವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಗುರುವಾರ ರಾತ್ರಿಯಷ್ಟೇ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು.
1974ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿ ಸೇರ್ಪಡೆಗೊಂಡಿದ್ದ ರಂಜಿತ್ ಸಿನ್ಹಾ ಐಟಿಬಿಪಿ, ರೈಲ್ವೆ ಬೋರ್ಡ್, ಬ್ಯಾಂಕಿಂಗ್ ಚೇರ್ಮನ್, ವ್ಯವಸ್ಥಾಪಕ ನಿರ್ದೇಶಕರಾಗಿ, ಸೆನ್ಸಾರ್ ಬೋರ್ಡ್ ಸಿಇಒ ಆಗಿಯೂ ಸೇವೆ ಸಲ್ಲಿಸಿದ್ದಾರೆ. ಭಾರತ-ಟಿಬೆಟ್ ಗಡಿ ಭದ್ರತಾ ಪಡೆಯ ಮಹಾನಿರ್ದೆಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 2012ರಲ್ಲಿ ಸಿಬಿಐ ನಿರ್ದೇಶಕರಾಗಿ ನೇಮಕಗೊಂಡರು. ಸುಮಾರು 38 ವರ್ಷ ಸೇವೆ ಸಲ್ಲಿಸಿದ ಅವರು ನಿವೃತ್ತರಾಗಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!