ಪರೀಕ್ಷೆ ಇಲ್ಲದೇ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳು ಪಾಸ್
Published
0
ಬೆಂಗಳೂರು : ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚಾಗುತ್ತಿದೆ. ಹಾಗಾಗಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಕಷ್ಟವೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹೀಗಾಗಿ 1 ರಿಂದ 9 ನೇ ತರಗತಿಯ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಪಾಸು ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ. ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪರೀಕ್ಷೆಗಳನ್ನು ನಡೆಸದೇ ವಿಶ್ಲೇಷಣಾ ಮೌಲ್ಯಾಂಕನದ ಆಧಾರದ ಮೇಲೆ ಪಾಸು ಮಾಡಲು ತೀರ್ಮಾನಿಸಲಾಗಿದೆ.