ಬೆಂಗಳೂರು : ರಾಜ್ಯ ಸರ್ಕಾರದಿಂದ ಹೊಸ ಪರಿಷ್ಕøತ ಮಾರ್ಗಸೂಚಿ ಪ್ರಕಟಗೊಂಡಿದೆ. ಕೊರೋನಾ ನಿಯಂತ್ರಣಕ್ಕಾಗಿ ರಾತ್ರಿ ಕಫ್ರ್ಯೂ ಮತ್ತು ವೀಕೆಂಡ್ ಕಫ್ರ್ಯೂ ಜಾರಿ ಮಾಡಲಾಗಿದೆ. ಈ ಹಿಂದಿನ ಮಾರ್ಗಸೂಚಿಯಲ್ಲಿ ಮನರಂಜನಾ ತಾಣಗಳು, ಶಾಲಾ ಕಾಲೇಜು ಬಂದ್ ಮಾಡಿ, ಅಗತ್ಯ ಸೇವೆಗಳ ಜೊತೆಗೆ ಇತರ ಸೇವೆಗಳಿಗೂ ಅವಕಾಶ ನೀಡಲಾಗಿತ್ತು. ಆದರೆ, ಇದೀಗ ಅಗತ್ಯ ಸೇವೆಗಳ ಹೊರತಾಗಿ ಎಲ್ಲಾ ಶಾಪ್ ಗಳನ್ನು ಬಂದ್ ಮಾಡಲು ಆದೇಶಿಸಲಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಹೊಸ ಮಾರ್ಗಸೂಚಿ ಪ್ರಕಟಿಸಿದ್ದಾರೆ.