Connect with us

Hi, what are you looking for?

Diksoochi News

Uncategorized

ಪ್ರಥಮ ಪಿಯುಸಿ ಪರೀಕ್ಷೆ ರದ್ದು; ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ

0

ಬೆಂಗಳೂರು: ರಾಜ್ಯದಲ್ಲಿ ಕೋವಿಡ್19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಇದೇ ವೇಳೆ ಮೊದಲ ವರ್ಷದ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಗಳನ್ನು ರದ್ದು ಮಾಡಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲಾಗುವುದು ಎಂದಿದ್ದಾರೆ. ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು.
ಈಗಾಗಲೇ ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!