ನವದೆಹಲಿ : ಕರ್ನಾಟಕಕ್ಕೆ ಕೇಂದ್ರದಿಂದ ಆಕ್ಸಿಜನ್ ಪ್ರಮಾಣ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ. ರಾಜ್ಯಕ್ಕೆ 1200 ಮೆಟ್ರಿಕ್ ಟನ್ ಆಕ್ಸಿಟನ್ ನೀಡುವಂತೆ ಹೇಳಿದೆ.
ವೈದ್ಯಕೀಯ ಆಮ್ಲಜನಕ ಪ್ರಮಾಣವನ್ನು 965 ಮೆಟ್ರಿಕ್ ಟನ್ ನಿಂದ 1200 ಮೆಟ್ರಿಕ್ ಟನ್ ಗೆ ಹೆಚ್ಚಿಸಬೇಕೆಂದು ಕರ್ನಾಟಕ ಹೈಕೋರ್ಟ್ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಆದರೆ, ಕೇಂದ್ರದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸಮರ್ಥಿಸಿದೆ.
Advertisement. Scroll to continue reading.