ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಆಸ್ಪತ್ರೆಗಳಲ್ಲಿ ಬೆಡ್ ಕೊಡಿ, ಆಸ್ಪತ್ರೆಗಳಲ್ಲಿ ವೈದ್ಯರನ್ನು ಕೊಡಿ. ಜನರಿಗೆ ವ್ಯಾಕ್ಸಿನ್ ನೀಡಿ. ಆಕ್ಸಿಜನ್ ನೀಡಿ. ಕಾರ್ಮಿಕರಿಗೆ ಪರಿಹಾರ ಕೊಡಿ. ಇದ್ಯಾವುದೂ ಆಗದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಿ ಎಂದು ಸೋಮವಾರ ಹೆಬ್ರಿಯ ಕಾಂಗ್ರೆಸ್ ಕಚೇರಿ ಎದುರು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿ ಭಿತ್ತಿಪತ್ರ ಪ್ರದರ್ಶಿಸಿದರು.
ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರ ಕರೋನ ಸೋಂಕು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಮುದ್ರಾಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶಶಿಕಲಾ ಡಿ ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರಜನಿ ಹೆಬ್ಬಾರ್ , ಗ್ರಾಂ. ಪಂ ಸದಸ್ಯರಾದ ಹುತ್ತುರ್ಕೆ ದಿನೇಶ್ ಶೆಟ್ಟಿ, ಎಚ್ ಜನಾರ್ದನ್, ಮುಖಂಡರಾದ ಲಕ್ಷ್ಮಣಾಚಾರ್ ವರಂಗ, ಶಂಕರ್ ಸೇರಿಗಾರ್ , ನಾಗರಾಜ ಭಂಡಾರಿ ಹಾಗೂ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.