ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ತಾಲೂಕಿನ ವಿವಿಧ ಗ್ರಾಮಪಂಚಾಯತಿಗಳ ಪ್ರದೇಶದ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಚಲನವಲನಗಳನ್ನು ಜಿಲ್ಲಾಧಿಕಾರಿ ಜಿ. ಜಗದೀಶ್ ಪರಿಶೀಲನೆ ನಡೆಸಿದರು. ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಕೋವಿಡ್ 19 ಕಾರ್ಯಕ್ರಮಗಳ ಪರಿಶೀಲನೆ ನಡೆಸಿದರು.
ಪಾಸಿಟಿವ್ ಬಂದಿರುವ ಮನೆಗಳಿಗೆ ಭೇಟಿ ನೀಡಿ, ಧೈರ್ಯ ತುಂಬಿ, ಮನೆಯಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತು ಮಾಹಿತಿ ನೀಡಿದರು.
Advertisement. Scroll to continue reading.
ಯಾವುದೇ ಗೊಂದಲಕ್ಕೆ ಒಳಗಾಗದೆ ಯಾವುದೇ ತೊಂದರೆಗಳು ಕಂಡು ಬಂದರೆ ತಕ್ಷಣ ಗ್ರಾಮಪಂಚಾಯತ್ ಟಾಸ್ಕ್ ಫೋರ್ಸ್ ಅಧ್ಯಕ್ಷರನ್ನು ಸಂಪರ್ಕಿಸುವಂತೆ ತಿಳಿಸಿದರು. ಅವರೊಂದಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರಾದ ಸಂತೋಷ್ ಕುಮಾರ್, ಗಣಪತಿ ಎಂ., ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಕರಣಿಕರು, ಗ್ರಾಮ ಪಂಚಾಯತ್ ಸಿಬ್ಬಂದಿ ಹಾಜರಿದ್ದರು.
In this article:covid 19 Hebri, DC Jagadeesh, Diksoochi news, diksoochi Tv, diksoochi udupi, hebri
Click to comment