Connect with us

Hi, what are you looking for?

Diksoochi News

Uncategorized

ಬೆಂಗಳೂರು : ದ.ಕ ಮತ್ತು ಉಡುಪಿ ಜಿಲ್ಲೆಯ ಪಡಿತರದಾರರಿಗೆ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಣೆ ಕುರಿತು ಸಭೆ

0

ವರದಿ : ದಿನೇಶ್ ರಾಯಪ್ಪನಮಠ

ಬೆಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಪಡೆಯುವ ಜನಸಾಮಾನ್ಯರಿಗೆ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂದು ಪ್ರಸ್ತಾವನೆ ಬಂದಿದೆ. ಈ ಹಿನ್ನೆಲೆಯಲ್ಲಿ, ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರಾದ ಉಮೇಶ್ ಕತ್ತಿಯವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು.

ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಬತ್ತದ ತಳಿಗಳಾದ ಎಂ ಒ 4, ಜಯ, ಅಭಿಲಾಷ, ಭದ್ರ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಕೇಂದ್ರ ಸರ್ಕಾರದ ಅನುಮತಿಗಾಗಿ ಸಭೆ ನಡೆಯಿತು. ಸುದೀರ್ಘ ಚರ್ಚೆಯ ಬಳಿಕ ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ತಾವನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

Advertisement. Scroll to continue reading.

ಬೇರೆಡೆಯಿಂದಲೂ ಭತ್ತ ಖರೀದಿ

ಅವಳಿ ಜಿಲ್ಲೆಗಳ ಕೆಂಪು ಕುಚ್ಚಲಕ್ಕಿ ಬೇಡಿಕೆಯನ್ನು ಪೂರೈಸಲು ಸುಮಾರು 20 ಲಕ್ಷ ಕ್ವಿಂಟಾಲ್ ಭತ್ತದ ಪೂರೈಕೆ ಆಗಬೇಕಾಗಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹೊರತಾಗಿಯೂ ಮಂಡ್ಯ, ಮೈಸೂರು, ರಾಮನಗರ, ಬೆಳಗಾವಿ ಜಿಲ್ಲೆಗಳಿಂದ ಭತ್ತ ಖರೀದಿಸಲು ಸಭೆಯಲ್ಲಿ ಚರ್ಚೆ ನಡೆಯಿತು. ಕೇಂದ್ರದ ಅನುಮತಿ ಪಡೆದು ನವೆಂಬರ್ ತಿಂಗಳಿಂದ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಉತ್ಪಾದಿಸಿ ಪಡಿತರದ ಮೂಲಕ ಜನಸಾಮಾನ್ಯರಿಗೆ ಹಂಚಲು ಕ್ರಮಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದರು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ಪಾದನೆಯಾಗಿ ಪೂರೈಕೆ ಆಗಬಹುದಾದ ಭತ್ತದ ಪ್ರಮಾಣ ಕಡಿಮೆಯಾದಲ್ಲಿ, ಇತರ ಜಿಲ್ಲೆಗಳಿಂದ ಬತ್ತವನ್ನು ಖರೀದಿಸಲಾಗುವುದು ಎಂದು ಕರ್ನಾಟಕ ಆಹಾರ ಮತ್ತು ನಾಗರೀಕ ಪೂರೈಕೆ ಸರಬರಾಜು ನಿಗಮ ನಿಯಮಿತದ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಕೊಡ್ಗಿ ಹೇಳಿದರು. ಈ ಸಂದರ್ಭ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಚಿವರ ಆಪ್ತ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

0 ಮಂಗಳೂರು: ನಗರದ ಬಾವುಟಗುಡ್ಡೆ ಮೆಡಿಕಲ್ ಕಾಲೇಜಿನ ಟಾಯ್ಲೆಟ್‌ನಲ್ಲಿ ಮೊಬೈಲ್‌ ಇಟ್ಟು ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದು, ಮೊಬೈಲ್‌ನಲ್ಲಿ 6 ನಿಮಿಷದ ವಿಡಿಯೋ ಪತ್ತೆಯಾಗಿದೆ. ಪ್ರಕರಣಕ್ಕೆ...

ಸಿನಿಮಾ

2 ಬೆಂಗಳೂರು: ತಮ್ಮ 40ರ ಆಸುಪಾಸಿನಲ್ಲಿದ್ದರೂ, ಎಳೆ ಹುಡುಗಿಯರಿಗೂ ಕಡಿಮೆ ಇಲ್ಲದಂತೆ ಮೈಮಾಟ ತೋರಿಸುವ ಮೂಲಕ ಸೋಶಿಯಲ್‌ ಮೀಡಿಯಾದಲ್ಲಿ ಫೇಮಸ್‌ ಆಗಿದ್ದ ಕಿರುತೆರೆ ನಟಿ ಜ್ಯೋತಿ ರೈ ಈಗ ಕೆಟ್ಟ ಕಾರಣಕ್ಕಾಗಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ...

ರಾಷ್ಟ್ರೀಯ

0 ಶ್ರೀನಗರ: ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಎಲ್‌ಇಟಿ ಕಮಾಂಡರ್ ಸೇರಿ ಮೂವರ ಹತ್ಯೆಯಾಗಿದೆ. ದಕ್ಷಿಣ...

ಕ್ರೀಡೆ

0 ಹೀನಾಯ ಸೋಲಿನ ನಂತರ ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೊಯೆಂಕಾ ಕೋಪಗೊಂಡಿದ್ದಾರೆ. ತಂಡ ನೀಡಿದ ಪ್ರದರ್ಶನದಿಂದ ಅಸಮಾಧಾನಗೊಂಡಂತೆ ಕಂಡುಬಂತು. ಸಂಜೀವ್ ಅವರು ನಾಯಕ ಕೆಎಲ್ ರಾಹುಲ್ ಅವರೊಂದಿಗೆ ಕೋಪದಲ್ಲಿ...

ರಾಷ್ಟ್ರೀಯ

1 ಮುಂಬೈ: ಬೀದಿ ಬದಿಯಲ್ಲಿ ಚಿಕನ್ ಬೀದಿ ಬದಿಯಲ್ಲಿ ಚಿಕನ್ ಶವರ್ಮಾ ತಿಂದ ಯುವಕನೊಬ್ಬ ಮೃತಪಟ್ಟಿದ್ದು, ಐವರು ಅಸ್ವಸ್ಥಗೊಂಡ ಘಟನೆ ಮಹಾರಾಷ್ಟ್ರದ ಮನ್‌ಖುರ್ದ್‌ನ ನಗರದಲ್ಲಿ ನಡೆದಿದೆ ಪ್ರಥಮೇಶ್ ಭೋಕ್ಷೆ (19) ಮೃತ ಯುವಕ....

error: Content is protected !!