Connect with us

Hi, what are you looking for?

Diksoochi News

Uncategorized

ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಟ್ರೇಲರ್ ಬಿಡುಗಡೆ ದಿನಾಂಕ ಪ್ರಕಟ

0

ಚಂದನವನ : ರಕ್ಷಿತ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಚಿತ್ರ 777 ಚಾರ್ಲಿ' ಯ ಟ್ರೇಲರ್ ಬಿಡುಗಡೆ ದಿನಾಂಕ ಪ್ರಕಟವಾಗಿದೆ. ಜೂನ್ 6 ರಂದು ಟ್ರೇಲರ್ ಐದು ಭಾಷೆಗಳಲ್ಲಿ ಬಿಡುಗಡೆಗೊಳ್ಳಲಿದೆ. ಟ್ರೇಲರ್ ಗೆಲೈಫ್ ಆಫ್ ಚಾರ್ಲಿ’ ಎಂದು ಹೆಸರಿಡಲಾಗಿದೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಭಾಷೆಯಲ್ಲಿ ಟ್ರೇಲರ್ ಬಿಡುಗಡೆಯಾಗಲಿದೆ. ನಾಯಿಯೊಂದಿಗಿನ ಒಡನಾಟದ ಕುರಿತು ಚಿತ್ರ ಮೂಡಿ ಬರಲಿದೆ ಅನ್ನೋದು ಈಗಾಗಲೇ ಪಕ್ಕಾ ಆಗೋಗಿದೆ.

ಕಿರಣ್ ರಾಜ್ ನಿರ್ದೇಶಿಸಿರುವ ಚಿತ್ರಕ್ಕೆ ಸ್ವತಃ ರಕ್ಷಿತ್ ಶೆಟ್ಟಿ ಹಾಗೂ ಜಿ.ಎಸ್.ಗುಪ್ತ ಬಂಡವಾಳ ಹೂಡಿದ್ದಾರೆ. ಸಂಗೀತ ಶೃಂಗೇರಿ, ರಾಜ್ ಬಿ.ಶೆಟ್ಟಿ, ದಾನಿಶ್ ಸೇಟ್ ಮೊದಲಾದವರು ನಟಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!