ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28) ಬಂಧಿತ ಆರೋಪಿಗಳು. ಶಿವ ಶಂಕರ್ ಫುಡ್ ಡೆಲಿವರಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. ಸಚಿನ್ ಮಣಿಪಾಲದ ಕ್ಯಾಂಟಿನ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಮಣಿಪಾಲ ಠಾಣಾ ವ್ಯಾಪ್ತಿಯ ತಮ್ಮ ಮನೆಯಲ್ಲಿ ಶಿವಶಂಕರ್ ಸ್ನೇಹಿತೆಯ ಮಗಳ ಮೇಲೆಯೇ ಇಬ್ಬರೂ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಬಂದ ದೂರಿನ ಅನ್ವಯ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್ ಆರೋಪಿಗಳ ವಿರುದ್ಧ ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ ಠಾಣೆ ಪೊಲೀಸ್ ನಿರೀಕ್ಷಕ ಪ್ರಮೋದ್ ಮಾರ್ಗದರ್ಶನದಲ್ಲಿ ಉಪನಿರೀಕ್ಷಕಿ ವೈಲೆಟ್ ಫೆಮಿನಾ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ಮಕ್ಕಳ ಸಹಾಯವಾಣಿಗೆ ದೂರು ಬಂದಿದ್ದು, ತಕ್ಷಣ ನೊಂದ ಬಾಲಕಿಗೆ ರಕ್ಷಣೆ ಮತ್ತು ಪುನರ್ವಸತಿ ಕಲ್ಪಿಸಲಾಗಿದೆ.
ಫೋಕ್ಸೋ ಕಾಯ್ದೆಯಡಿ ಆರೋಪಿಗಳನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಲಾಗಿದೆ.