Connect with us

Hi, what are you looking for?

ರಾಜ್ಯ

ಕನ್ನಡದಲ್ಲಿ ಇಂಜಿನಿಯರಿಂಗ್ ಕೋರ್ಸ್ ಆರಂಭಿಸಲು ಅನುಮತಿ; ಎಬಿವಿಪಿ ಸ್ವಾಗತ

0

ದೇಶದ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡಲು ಎಲ್ಲರಿಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಇಂಜಿನಿಯರಿಂಗ್ ಕೋರ್ಸ್ ಗಳನ್ನು 2020-21ನೇ ಶೈಕ್ಷಣಿಕ ಸಾಲಿನಿಂದ ಪ್ರಾರಂಭಿಸಲು ಅನುಮತಿ ನೀಡಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸ್ವಾಗತಿಸುತ್ತದೆ.
ಕರ್ನಾಟಕ ರಾಜ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇದು ಅನುಕೂಲಕರವಾಗಿದೆ. ಇಲ್ಲಿಯವರೆಗೆ ಕೇವಲ ನಗರ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚು ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಆದರೆ ಇನ್ನು ಮುಂದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂಜಿನಿಯರಿಂಗ್ ವ್ಯಾಸಂಗ ಮಾಡಲು ಇದು ಪೆÇ್ರೀತ್ಸಾಹಕರವಾಗಲಿದೆ. ಕನ್ನಡ ಭಾಷೆಯಲ್ಲಿ ವ್ಯಾಸಂಗ ಮಾಡುವ ವಿಷಯ ಕೇವಲ ಅನುಮತಿ ಹಂತದಲ್ಲಿ ನಿಲ್ಲದೆ ಇದನ್ನು ಸರಿಯಾದ ರೀತಿಯಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಸರ್ಕಾರ ವಿಶೇಷವಾಗಿ ವಿಟಿಯು ಪಠ್ಯಪುಸ್ತಕಗಳ ಮತ್ತು ಇತರೆ ಪಠ್ಯಕ್ಕೆ ಸಹಾಯವಾಗುವ ಅನುವಾದಗಳನ್ನು ಶೀಘ್ರಗತಿಯಲ್ಲಿ ಮಾಡಬೇಕಿದೆ ಮತ್ತು ಸರಿಯಾದ ತಯಾರಿಯ ಜೊತೆಯಲ್ಲಿ ಪಠ್ಯಪುಸ್ತಕಗಳ (ಅನುವಾದಿತ) ಯಾವುದೇ ಕೊರತೆಯಾಗದಂತೆ ನಿಗಾವಹಿಸಬೇಕೆಂದು ಮತ್ತು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಜ್ಞರ ಸಮಿತಿ ರಚಿಸಿ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗಕ್ಕೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಲು ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ಸಲಹೆ ನೀಡುತ್ತದೆ. ಂಃಗಿP ರಾಜ್ಯ ಕಾರ್ಯದರ್ಶಿ ಪ್ರತೀಕ್ ಮಾಳಿ ಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!