Connect with us

Hi, what are you looking for?

ಕರಾವಳಿ

ವಿವಿಧ ಶೈಕ್ಷಣಿಕ ಸಮಸ್ಯೆಗಳನ್ನು ಸರ್ಕಾರ ಶೀಘ್ರ ಬಗೆಹರಿಸಬೇಕು ; ಕ್ಯಾಂಪಸ್ ಫ್ರಂಟ್ ಒತ್ತಾಯ

0

ಮಂಗಳೂರು : ಕರ್ನಾಟಕ ರಾಜ್ಯದಲ್ಲಿ ವಿವಿಧ ವಲಯಗಳಲ್ಲಿ ಶೈಕ್ಷಣಿಕ ಸಮಸ್ಯೆಗಳು ಉದ್ಭವಿಸುತ್ತಿದೆ. ರಾಜ್ಯ ಸರ್ಕಾರವು ಶಿಕ್ಷಣ ವಲಯಗಳಿಗೂ ತಮ್ಮ ಗಮನಹರಿಸಬೇಕಾಗಿದೆ. ರಾಜ್ಯದಲ್ಲಿ ಲಾಕ್‍ಡೌನ್ ಸಂದರ್ಭದಲ್ಲೂ ವಿದ್ಯಾರ್ಥಿಗಳು, ಶಿಕ್ಷಕರು ಹಲವಾರು ರೀತಿಯ ಸಮಸ್ಯೆಗಳಿಗೆ ಒಳಗಾಗಿದ್ದಾರೆ. ಆದರೆ ಇದರ ಬಗ್ಗೆ ರಾಜ್ಯ ಸರ್ಕಾರವು ಯಾವುದೇ ಗಮನಹರಿಸದಿರುವುದು ಖೇದಕರದ ಸಂಗತಿಯಾಗಿದೆ. ಕ್ಯಾಂಪಸ್ ಫ್ರಂಟ್ ಶೈಕ್ಷಣಿಕ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ಒತ್ತಾಯಿಸುತ್ತದೆ ಎಂದು ಕ್ಯಾಂಪಸ್ ಫ್ರಂಟ್ ನ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲ್‍ಕಟ್ಟೆ ಹೇಳಿದ್ದಾರೆ.
ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಲಾಕ್‍ಡೌನ್‍ನ ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲೂ ಹಲವು ಖಾಸಗಿ ಶಾಲಾ – ಕಾಲೇಜುಗಳು ಶುಲ್ಕವನ್ನು ಪಾವತಿಸಲು ಹೇಳಿ ಮಾನಸಿಕ ಕಿರುಕುಳ ನೀಡಿ ಪೆÇೀಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಹಾಗೂ ಆರ್ಥಿಕ ಸಂಕಷ್ಟದ ಕಾರಣ ವಿದ್ಯಾರ್ಥಿಗಳು ಶುಲ್ಕ ಪಾವತಿಸದಿರುವುದರಿಂದ ಆನ್ಲೈನ್ ತರಗತಿಗಳಿಗೆ ಅನುಮತಿ ನಿರಾಕರಿಸುತ್ತಿದ್ದಾರೆ. ಶುಲ್ಕ ಪಾವತಿಸಲು ಹೆಚ್ಚಿನ ಸಮಯವಕಾಶವನ್ನು ನೀಡಬೇಕು ಹಾಗೂ ಆನ್ಲೈನ್ ತರಗತಿಗಳಿಗೆ ಅನುಮತಿ ನಿರಾಕರಿಸಿ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಚೆಲ್ಲಾಟವಾಡಬಾರದೆಂದು ಸರ್ಕಾರ ಶಿಕ್ಷಣ ಸಂಸ್ಥೆಗಳಿಗೆ ನೋಟೀಸು ಜಾರಿಗೊಳಿಸಬೇಕು.
ಈ ಬಾರಿಯ ಅರಿವು ಸಾಲ ಯೋಜನೆ ಹಾಗೂ ವಿದ್ಯಾರ್ಥಿ ವೇತನ ಮಂಜೂರಾಗದೆ ಅದನ್ನೇ ನಂಬಿದ್ದ ವಿದ್ಯಾರ್ಥಿಗಳು ಆತಂಕಕ್ಕೆ ಸಿಲುಕಿದ್ದಾರೆ. ಪ್ರಸಕ್ತ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದರೂ ಕಳೆದ ಸಲದ ವಿದ್ಯಾರ್ಥಿ ವೇತನ ಇನ್ನೂ ಕೂಡ ರಾಜ್ಯದ ಹಲವಾರು ವಿದ್ಯಾರ್ಥಿಗಳಿಗೆ ಮಂಜೂರಾಗಿಲ್ಲ. ಅದೇ ರೀತಿ ಅರಿವು ಸಾಲ ಯೋಜನೆಯ ಬಗ್ಗೆ ಇಲಾಖೆಯೇ ಮೌನ ವಹಿಸಿದಂತೆ ಭಾಸವಾಗುತ್ತಿದೆ. ಸರ್ಕಾರವು ಆದಷ್ಟು ಶೀಘ್ರ ಈ ಸಮಸ್ಯೆಯನ್ನು ಬಗೆಹರಿಸಿ ಶೀಘ್ರ ಅರಿವು ಸಾಲ ಯೋಜನೆ ಹಾಗೂ ವಿದ್ಯಾರ್ಥಿ ವೇತನ ಮಂಜೂರುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ

ಸರ್ಕಾರವು ಘೋಷಿಸಿದ ಆರ್ಥಿಕ ಪ್ಯಾಕೇಜ್‍ನಲ್ಲಿ ಶಿಕ್ಷಕರಿಗೆಯಾಗಲಿ, ಶೈಕ್ಷಣಿಕ ವಲಯದಲ್ಲಿ ದುಡಿಯುತ್ತಿರುವವರಿಗಾಗಲೀ ಯಾವುದೇ ಪ್ಯಾಕೇಜ್ ಘೋಷಿಸದೆ ಶೈಕ್ಷಣಿಕ ಕ್ಷೇತ್ರವನ್ನು ನಿರ್ಲಕ್ಷಿಸಿದ್ದಾರೆ. ಲಾಕ್‍ಡೌನ್‍ನಿಂದ ಆರ್ಥಿಕ ಸಂಕಷ್ಟಕ್ಕೀಡಾದವರಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಾಗ ಶಿಕ್ಷಕರನ್ನೂ ಪರಿಗಣಿಸಬೇಕಾಗಿತ್ತು, ದೇಶವನ್ನು ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕೊಂಡೊಯ್ಯುವ ಮಹತ್ತರವಾದ ಜವಾಬ್ದಾರಿ ನಿರ್ವಹಿಸುತ್ತಿರುವ ಬಹುತೇಕ ಶಿಕ್ಷಕರ ಬದುಕು ಇಂದು ಕತ್ತಲಾವರಿಸಿವೆ. ಗುತ್ತಿಗೆ, ಅರೆಕಾಲಿಕ ನೇಮಕಾತಿಯ ಮೂಲಕ ಶಿಕ್ಷಕ ವೃತ್ತಿಗೆ ಆಯ್ಕೆಯಾದ ಶಿಕ್ಷಕರು ಸಿಗುತ್ತಿದ್ದ ಅಲ್ಪಸ್ವಲ್ಪ ವೇತನದಿಂದ ಸ್ವಾಭಿಮಾನದ ಜೀವನ ನಡೆಸುತ್ತಿದ್ದ ಶಿಕ್ಷಕರಿಗೆ ಲಾಕ್‍ಡೌನ್ ಸಂದರ್ಭದಲ್ಲಿ ಯಾವುದೇ ವೇತನವಿಲ್ಲದೆ, ತಮ್ಮ ಅಳಲನ್ನು ಯಾರ ಬಳಿಯೂ ಹೇಳಲಾರದ ಸ್ಥಿತಿಯಲ್ಲಿದ್ದಾರೆಶೀಘ್ರವಾಗಿ ರಾಜ್ಯ ಸರ್ಕಾರವು ಶಿಕ್ಷಕರಿಗೂ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕಾಗಿದೆ ಎಂದು ಅಥಾವುಲ್ಲ ಪುಂಜಾಲ್‍ಕಟ್ಟೆ ಹೇಳಿದ್ದಾರೆ.

Advertisement. Scroll to continue reading.

ರಾಜ್ಯದ ಅರೆವೈದ್ಯಕೀಯ ವಿಭಾಗಕ್ಕೆ ಸರ್ಕಾರದ ಅಧೀನದಲ್ಲಿ ಮಂಡಳಿ ಸ್ಥಾಪಿಸಿ

ರಾಜ್ಯದ ಅರೆವೈದ್ಯಕೀಯ ವಿಭಾಗಕ್ಕೆ ಸರ್ಕಾರದ ಅಧೀನದಲ್ಲಿ ಮಂಡಳಿ ಸ್ಥಾಪಿಸಬೇಕೆಂದು ಅರೆವೈದ್ಯಕೀಯ ವಿದ್ಯಾರ್ಥಿಗಳು ಹೋರಾಟ ಪ್ರಾರಂಭಿಸಿದ್ದಾರೆ , ವೈದ್ಯಕೀಯ ಶಿಕ್ಷಣದ ಅವಿಭಾಜ್ಯ ಅಂಗವಾಗಿರುವ ಅರೆವೈದ್ಯಕೀಯ ಕೋರ್ಸ್ ಗೆ ಪ್ರತ್ಯೇಕವಾಗಿ ಸರಕಾರದ ಮಂಡಳಿ ಇಲ್ಲದ ಕಾರಣ ಅರೆವೈದ್ಯಕೀಯ ಪದವೀಧರರು ಮತ್ತು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸ ಮುಗಿದ ನಂತರ ಉದ್ಯೋಗಕ್ಕಾಗಿ ಪರದಾಡುತ್ತಿದ್ದಾರೆ.
ರಾಜ್ಯದಲ್ಲಿ ವಿದ್ಯಾರ್ಥಿಗಳು ವಿವಿಧ ಕಾಲೇಜುಗಳಿಂದ ವರ್ಷಾನುವರ್ಷ ಬಹುದೊಡ್ಡ ಸಂಖ್ಯೆಯಲ್ಲಿ ಅರೆವೈದ್ಯಕೀಯ ಪದವಿಯನ್ನು ಪಡೆದು ತೇರ್ಗಡೆಯಾಗುತ್ತಾರೆ. ಆದರೆ, ಸರಕಾರದಿಂದ ಅಂಗೀಕೃತವಾದ ಅಧಿಕೃತ ಅರೆವೈದ್ಯಕೀಯ ಮಂಡಳಿ ಇಲ್ಲಿಯವರೆಗೂ ಸ್ಥಾಪನೆಯಾಗಿಲ್ಲ. ಹಲವು ಖಾಸಗಿ ನೋಂದಣಿಯಾದ ಸಂಸ್ಥೆಗಳಿದ್ದರೂ ಈಗ ಅದಕ್ಕೆ ರಾಷ್ಟ್ರ ಹಾಗೂ ಅಂತಾರಾಷ್ಟ್ರಮಟ್ಟದಲ್ಲಿ ಮಾನ್ಯತೆ ಇಲ್ಲದೆ ಇರುವುದರಿಂದ ಅರೆವೈದ್ಯಕೀಯ ಪದವೀಧರರು ಉದ್ಯೋಗಕ್ಕಾಗಿ ಪರದಾಡುವಂತಾಗಿದೆ. ಅಂತರ್ ರಾಜ್ಯ ಹಾಗೂ ವಿದೇಶಗಳಲ್ಲಿ ಉದ್ಯೋಗ ಮಾಡುವ ಅವಕಾಶವು ಈಡೇರುತ್ತಿಲ್ಲ.
ತಕ್ಷಣ ರಾಜ್ಯ ಸರಕಾರವು ವಿದ್ಯಾರ್ಥಿಗಳಿಗೆ, ಪದವೀಧರರಿಗೆ ಆಗುತ್ತಿರುವ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಇದಕ್ಕೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ಸರಕಾರದ ಅಧೀನದಲ್ಲಿ ಅರೆವೈದ್ಯಕೀಯ ಮಂಡಳಿ ಸ್ಥಾಪಿಸಬೇಕಾಗಿದೆ.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ; ಶಿಕ್ಷಣವನ್ನು ಕೇಸರೀಕರಣಗೊಳಿಸುವ ಹುನ್ನಾರ

ಇದೇ ಶೈಕ್ಷಣಿಕ ವರ್ಷದಿಂದ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಕುರಿತು ಉನ್ನತ ಶಿಕ್ಷಣ ಸಚಿವರು ನೀಡಿರುವ ಹೇಳಿಕೆಯು ಹಾಸ್ಯಾಸ್ಪದವಲ್ಲದೇ ಶಿಕ್ಷಣವನ್ನು ಕೇಸರಿಕರಣಗೊಳಿಸುವ ಹುನ್ನಾರವು ಆಗಿದೆ. ಹೊಸ ಶಿಕ್ಷಣ ನೀತಿಯಲ್ಲಿ ಕಿವಿಗೆ ತಂಪು ನೀಡುವಂತಿರುವ ಆಕರ್ಷಕವಿರುವ ಪೆÇಳ್ಳು ಮಾತುಗಳು ಕೇವಲ ಘೋಷಣೆಗಳಿಗೆ ಮಾತ್ರ ಸೀಮಿತಿವಾಗಿವೆ, ಅದನ್ನು ಕಾರ್ಯರೂಪಕ್ಕೆ ತರಬೇಕಾದರೆ ಅದಕ್ಕೆ ಸರಿಯಾದ ಪ್ರಾಯೋಗಿಕವಾಗಿ ವಾಸ್ತವಕ್ಕೆ ಪೂರಕವಾದ ಯೋಜನೆ ಇಲ್ಲ ಎಂದಿದ್ದಾರೆ. ಈ ಸಂದರ್ಭಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಸಮಿತಿ ಸದಸ್ಯ ಸಾಧಿಕ್ ಜಾರತ್ತಾರು, ಜಿಲ್ಲಾ ಮುಖಂಡರುಗಳಾದ ಸಿರಾಜ್ ಮಂಗಳೂರು, ಇಮ್ರಾನ್ ಪಾಂಡವರಕಲ್ಲು, ಗ್ರಾಮಾಂತರ ಜಿಲ್ಲಾಧ್ಯಕ್ಷ ಸರಫುದ್ದೀನ್ ಈ ಉಪಸ್ಥಿತರಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!