ಉಡುಪಿ : ಲಾಕ್ ಡೌನ್ ಸಂದರ್ಭದಲ್ಲಿ ಬೀದಿ ನಾಯಿಗಳ ಹಸಿವನ್ನು ನೀಗಿಸುವಲ್ಲಿ ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ಮಾದರಿ ಕಾರ್ಯ ಮಾಡುತ್ತಿದೆ. ಅಧ್ಯಕ್ಷರಾದ ಅನಂತ ಇನ್ನಂಜೆ ಇವರು ತಮ್ಮ 10 ಜನ ಗೆಳೆಯರ ಹಾಗು ಸಮಾನ ಮನಸ್ಕರೊಂದಿಗೆ ಜೊತೆಗೂಡಿ “Feed A stray Dog Feed The voiceless Just @ ₹20 ” ಎನ್ನುವ ಸಂಕಲ್ಪದೊಂದಿಗೆ ಕ್ರಿಯಾಶೀಲವಾಗಿ ಮತ್ತು ಸೃಜನಶೀಲವಾಗಿ ಯೋಚಿಸಿ ಚರ್ಚಿಸಿ ಬೀದಿ ನಾಯಿಗಳ ಹಸಿವು ನೀಗಿಸುವ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಅನೇಕ ಜನರ ಸಹಕಾರದೊಂದಿಗೆ ಉಡುಪಿಯಲ್ಲಿ ಪ್ರತಿದಿನ 200 ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದಾರೆ.
.

ಈ ಹಸ್ತಪ್ರದ ಚಾರಿಟೇಬಲ್ ಟ್ರಸ್ಟ್ ನ ಸದಸ್ಯರು ಬಹಳ ವ್ಯವಸ್ಥಿತವಾಗಿ ವಿವಿಧ ಕೆಲಸ ಕಾರ್ಯಗಳನ್ನು ಹಂಚಿಕೊಂಡಿದ್ದಾರೆ. ನಗರದ ವಿವಿಧ ಓಣಿಗಳಿಗೆ ತೆರಳಿ ಹಂಚುವ ಕಾರ್ಯಗಳನ್ನು ಸೇವಾ ಮನೋಭಾವದಿಂದ ಮಾಡುತ್ತಿದ್ದಾರೆ. ಅಲ್ಲದೆ ತಮಗೆ ದೇಣಿಗೆ ನೀಡಿದ ವ್ಯಕ್ತಿಗಳ ಹೆಸರನ್ನು ಆಹಾರದ ಪೊಟ್ಟಣದಲ್ಲಿ ಇರಿಸಿ ಅವರಿಗೆ ಆ ಚಿತ್ರವನ್ನು ಕಳಿಸುವ ಮೂಲಕ ಧನ್ಯತಾ ಭಾವವನ್ನು ತೋರುತ್ತಾರೆ.

