ಬೆಂಗಳೂರು : ಮುಂಗಾರು ಶುರುವಾಗಿದ್ದು, ಈಗಾಗಲೇ ಹಲವೆಡೆ ಮಳೆ ಶುರುವಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಜೂ.14 ರಂದು ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಜೂನ್ 10 ರಿಂದ 14 ರ ವರೆಗೆ ಬಹುತೇಕ ಎಲ್ಲಾ ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಸೂಚಿಸಿದೆ.
ಎಲ್ಲೆಲ್ಲಿ ಮಳೆ?
ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು ಮೈಸೂರು, ತುಮಕೂರಿನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Advertisement. Scroll to continue reading.