ಬೆಂಗಳೂರು : ರಾಜ್ಯದಲ್ಲಿ ಪಾಸಿಟಿವ್ ರೆಟ್ ಹೆಚ್ಚಿರುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ, ದಾವಣಗೆರೆ, ಕೊಡಗು, ಚಾಮರಾಜನಗರ, ಮಂಡ್ಯ, ಬೆಳಗಾವಿ ಜಿಲ್ಲೆಗಳಲ್ಲಿ ಲಾಕ್ ಡೌನ್ ಯಥಾ ಸ್ಥಿತಿ ಮುಂದುವರೆಯಲಿದೆ.
ಈ ಜಿಲ್ಲೆಗಳಲ್ಲಿ ಹೆಚ್ಚಿನ ಕಠಿಣ ಕ್ರಮವನ್ನು ಜಿಲ್ಲಾಡಳಿತ ತೆಗೆದುಕೊಳ್ಳಬಹುದು. ಉಳಿದ ಜಿಲ್ಲೆಗಳಲ್ಲಿ ಮಾರ್ಗಸೂಚಿ ಜೂ. 14 ರಿಂದ ಜೂ. 21ರ ಬೆಳಿಗ್ಗೆ 6 ಗಂಟೆ ವರೆಗೆ ಸಡಿಲಿಕೆ ಮಾಡಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕಾರ್ಖಾನೆಗಳಲ್ಲಿ 50 % ಸಿಬ್ಬಂದಿಗಳಿಗೆ ಅನುಮತಿ, ಗಾರ್ಮೆಂಟ್ಸ್ 30% ಸಿಬ್ಬಂದಿಗಳಿಗೆ ಅನುಮತಿ, ಅಂಗಡಿ, ಬೀದಿ ಬದಿ ವ್ಯಾಪಾರ, ಬಾರ್ ಗಳಿಗೆ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ನಿರ್ಮಾಣ ಚಟುವಟಿಕೆ ಸೀಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಪಾರ್ಕ್ ಗಳಲ್ಲಿ ಹಿರಿಯರು ವಾಕಿಂಗ್ ಮಾಡಲು ಬೆಳಿಗ್ಗೆ 5 ರಿಂದ 10 ಗಂಟೆಯವರೆಗೆ ಅವಕಾಶ ಇರಲಿದೆ. ಆಟೋ, ಟ್ಯಾಕ್ಸಿ ಕೇವಲ ಇಬ್ಬರಿಗೆ ಅವಕಾಶ. ಕೋವಿಡ್ ಕರ್ಫ್ಯೂ ರಾತ್ರಿ 7 ಗಂಟೆಯಿಂದ, ಹಾಗೂ ವೀಕೆಂಡ್ ಕರ್ಫ್ಯೂ ಶುಕ್ರವಾರ ಸಂಜೆ 7 ಗಂಟೆಯಿಂದ ಸೋಮವಾರ ಬೆಳಿಗ್ಗೆ 7 ಗಂಟೆಯವರೆಗೆ ಇರಲಿದೆ ಎಂದು ಸಿಎಂ ಹೇಳಿದ್ದಾರೆ.