ಚಂದನವನ : ಹಿರಿಯ ಪತ್ರಕರ್ತ ಹಾಗೂ ಚಿತ್ರನಟ ಸುರೇಶ್ ಚಂದ್ರ ವಿಧಿವಶರಾಗಿದ್ದಾರೆ. ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಅವರು ಇತ್ತೀಚಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಶುಕ್ರವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ.
80 ರ ದಶಕದಿಂದ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದರು. ಸಂಜೆವಾಣಿ ಪತ್ರಿಕೆಯಲ್ಲಿ ಸುದೀರ್ಘ ಅವಧಿಯ ವರೆಗೆ ಕೆಲಸ ಮಾಡಿದ್ದು, ಕಳೆದ ವರ್ಷವಷ್ಟೇ ನಿವೃತ್ತರಾಗಿದ್ದರು. ಎಸ್.ನಾರಾಯಣ್ ನಿರ್ದೇಶನದ ‘ಚೆಲುವಿನ ಚಿತ್ತಾರ’ ಚಲನಚಿತ್ರದ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಅವರು, 50 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.
Advertisement. Scroll to continue reading.