Connect with us

Hi, what are you looking for?

Diksoochi News

ಸಾಹಿತ್ಯ

ಹಿರಿಯ ಸಾಹಿತಿ, ಕವಿ ಸಿದ್ಧಲಿಂಗಯ್ಯ ಇನ್ನಿಲ್ಲ

0


ಹಿರಿಯ ಸಾಹಿತಿ, ಕವಿ ಸಿದ್ಧಲಿಂಗಯ್ಯ ವಿಧಿವಶರಾಗಿದ್ದಾರೆ. ಅವರಿಗೆ 67 ವರ್ಷ ವಯಸ್ಸಾಗಿತ್ತು.ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.

ಫೆಬ್ರವರಿ 3, 1954 ರಲ್ಲಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಮಂಚನ ಬೆಲೆಯಲ್ಲಿ ಅವರು ಜನಿಸಿದರು. ಬೆಂಗಳೂರಿನ ಸರ್ಕಾರಿ ಕಲಾ ಕಾಲೇಜಿನಲ್ಲಿ ಬಿ.ಎ.ಆನರ್ಸ್ ಪದವಿ, 1976ರಲ್ಲಿ ಬೆಂಗಳೂರು ವಿವಿಯಲ್ಲಿ ಸ್ವರ್ಣಪದಕದೊಂದಿಗೆ ಎಂ.ಎ ಪದವಿ, ಪ್ರೊ.ಜಿ.ಎಸ್.ಶಿವರುದ್ರಪ್ಪರ ಮಾರ್ಗದರ್ಶನದಲ್ಲಿ ‘ಗ್ರಾಮ ದೇವತೆಗಳು’ ಎಂಬ ಪ್ರೌಢ ಪ್ರಬಂಧದ ಮೇಲೆ 1989ರಲ್ಲಿ ಪಿ ಎಚ್ ಡಿ ಪದವಿ ಪಡೆದರು. ಬೆಂಗಳೂರು ವಿವಿ ಪ್ರಾಧ್ಯಾಪಕರಾಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

ಸಾಹಿತ್ಯ ಲೋಕಕ್ಕೆ ಅಪಾರ ಕೊಡುಗೆ

Advertisement. Scroll to continue reading.

ದಲಿತ ಕವಿ ಎಂದೇ ಖ್ಯಾತನಾಮರಾಗಿದ್ದರು ಡಾ.ಸಿದ್ಧಲಿಂಗಯ್ಯ. ಬಂಡಾಯ ಕವಿಯಾಗಿ ಜನಪ್ರಿಯರಾಗಿದ್ದರು. ಅವರ ಲೇಖನಿಯಿಂದ ಹವು ಕೃತಿಗಳು ಹೊರಹೊಮ್ಮಿವೆ.

1975ರಲ್ಲಿ ಅವರ ‘ಹೊಲೆಮಾದಿಗರ ಹಾಡು’ ಕವಲ ಸಂಕಲನ ಪ್ರಕಟಗೊಂಡಿತು. ಬಳಿಕ ‘ಸಾವಿರಾರು ನದಿಗಳು’, ‘ಕಪ್ಪುಕಾಡಿನ ಹಾಡು’, ‘ಅಲ್ಲೆಕುಂತವರು’ ‘ಮೆರವಣಿಗೆ’, ‘ನನ್ನ ಜನಗಳು ಮತ್ತು ಇತರ ಕವಿತೆಗಳು’, ‘ಆಯ್ದ ಕವನಗಳು’, ಮುಂತಾದ ಕವನ ಸಂಕಲನಗಳು ಪ್ರಕಟಗೊಂಡಿವೆ.

1991ರಲ್ಲಿ ‘ಪಂಚಮ’, ‘ನೆಲಸಮ’, ‘ಏಕಲವ್ಯ’ ಪ್ರಮುಖ ನಾಟಕಗಳು, ‘ಅವತಾರಗಳು’ ಎಂಬ ಪ್ರಬಂಧ ಕೃತಿಯು ಪ್ರಕಟಗೊಂಡಿದೆ. ‘ರಸಗಳಿಗೆಗಳು’, ‘ಎಡಬಲ’, ‘ಹಕ್ಕಿನೋಟ’, ‘ಜನಸಂಸ್ಕೃತಿ’, ‘ಉರಿಕಂಡಾಯ’ ಮುಂತಾದ ಲೇಖನ ಸಂಗ್ರಹಗಳು, ‘ಸದನದಲ್ಲಿ ಸಿದ್ಧಲಿಂಗಯ್ಯ ಭಾಗ 1 ಮತ್ತು 2’ ಸೇರಿದಂತೆ ವಿವಿಧ ಕೃತಿಗಳು ಪ್ರಕಟಗೊಂಡಿವೆ. ಅವರ ಆತ್ಮಕಥೆ ‘ಊರು ಕೇರಿ’ ಎರಡು ಭಾಗದಲ್ಲಿ ಪ್ರಕಟಗೊಂಡು ಪ್ರಸಿದ್ಧವಾಗಿವೆ. ಬೆಂಗಳೂರು ವಿಶ್ವವಿದ್ಯಾಲಯದ ಪ್ರಸಾರಂಗಕ್ಕಾಗಿ ಅವರು ‘ಸಮಕಾಲೀನ ಕನ್ನಡ ಕವಿತೆಗಳು’ ಭಾಗ-3 ಮತ್ತು ಭಾಗ-4ನ್ನು ಸಂಪಾದಿಸಿಕೊಟ್ಟಿದ್ದಾರೆ.

ಪುಟ್ಟಣ್ಣ ಕಣಗಾಲರು ನಿರ್ದೇಶಿಸಿದ ‘ಧರಣಿಮಂಡಲ ಮಧ್ಯದೊಳಗೆ’ ಚಿತ್ರಕ್ಕೆ ಅವರು ಬರೆದ ಸಾಹಿತ್ಯಕ್ಕೆ ರಾಜ್ಯಪ್ರಶಸ್ತಿ ಒಲಿದಿದೆ.

Advertisement. Scroll to continue reading.

ಊರು ಕೇರಿ – ಹಲವು ಭಾಷೆಗಳಿಗೆ ಅನುವಾದ

ಅವರ ‘ಊರು ಕೇರಿ’ ಆತ್ಮಕಥೆ ಇಂಗ್ಲಿಷ್‌ ಹಾಗೂ ತಮಿಳಿಗೂ ಅನುವಾದಗೊಂಡಿದ್ದು, ಇಂಗ್ಲಿಷ್‌ ಅನುವಾದವನ್ನು ಕೇಂದ್ರ ಸಾಹಿತ್ಯ ಅಕಾಡಮಿಯು ಪ್ರಕಟಿಸಿದೆ. ಅವರ ಹಲವಾರು ಕವಿತೆಗಳು ಇಂಗ್ಲಿಷ್‌, ಹಿಂದಿ, ತಮಿಳು, ಬಂಗಾಳಿ, ಮಲಯಾಳಂ ಮತ್ತು ತೆಲುಗು ಭಾಷೆಗಳಲ್ಲಿ ಅನುವಾದಗೊಂಡಿವೆ.

ಪ್ರಶಸ್ತಿಗಳು

ಶ್ರವಣಬೆಳಗೊಳದಲ್ಲಿ ನಡೆದ 81ನೇ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ಅವರು ವಹಿಸಿದ್ದರು. ರಾಜ್ಯೋತ್ಸವ ಪ್ರಶಸ್ತಿ, ಡಾ. ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಜಾನಪದ ತಜ್ಞ ಪ್ರಶಸ್ತಿ, ಡಾ. ಅಂಬೇಡ್ಕರ್ ಪ್ರಶಸ್ತಿ, ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ, ಬಾಬು ಜಗಜೀವನ ರಾಮ್‌ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ನೃಪತುಂಗ ಪ್ರಶಸ್ತಿ , ಪಂಪ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳು ಅವರನ್ನು ಅರಸಿ ಬಂದಿವೆ.

Advertisement. Scroll to continue reading.

ವಿಧಾನ ಪರಿಷತ್ತಿನ ಸದಸ್ಯ

ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ 1988-94 ಮತ್ತು 1995-2001ರವರೆಗೆ ಎರಡುಬಾರಿ ನಾಮಕರಣಗೊಂಡಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!