ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ.) ಕಾರ್ಕಳ ತಾಲೂಕು ವತಿಯಿಂದ ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಪರಮ ಪೂಜ್ಯ ಖಾವಂದರಾದ ಡಿ.ವೀರೇಂದ್ರ ಹೆಗ್ಗಡೆಯವರು ಮಂಜೂರುಗೊಳಿಸಿದ 25 ಲೀಟರ್ ಸ್ಯಾನಿಟೈಸರ್ ನ್ನು ವಿತರಿಸಲಾಯಿತು. ತಾಲೂಕು ಯೋಜನಾಧಿಕಾರಿ ಭಾಸ್ಕರ್ ವಿ. ಅವರು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಂತೋಷ್ ಅವರಿಗೆ ಹಸ್ತಾಂತರಿಸಿದರು.
ಬಳಿಕ ಮಾತನಾಡಿದ ವೈದ್ಯಾಧಿಕಾರಿ ಡಾ. ಸಂತೋಷ್ , ಕೋವಿಡ್ ಸಂದರ್ಭದಲ್ಲಿ ಅತೀ ತುರ್ತಾಗಿ ಸ್ಯಾನಿಟೈಸರ್ ಅಗತ್ಯದ ಬಗ್ಗೆ ಬೇಡಿಕೆ ನೀಡಿದಂತೆ ಪೂಜ್ಯರು ಒದಗಿಸಿರುವುದು ತುಂಬಾ ಅನುಕೂಲಕರವಾಗಿದೆ ಎಂದರು.
Advertisement. Scroll to continue reading.

ಈ ಸಂದರ್ಭ ಹೆಬ್ರಿ ತಹಶೀಲ್ದಾರ್ ಪುರಂದರ್ ಕೆ., ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲತಿ , ಹೆಬ್ರಿ ಸಿಟಿ ಒಕ್ಕೂಟದ ಅಧ್ಯಕ್ಷರು ರಾಜೇಶ್ ಆಚಾರ್ಯ, ಸೇವಾ ಪ್ರತಿನಿಧಿ ಕಾಂತಿ ಹೆಗ್ಡೆ ಉಪಸ್ಥಿತರಿದ್ದರು.