ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಕೇಂದ್ರ ಸರ್ಕಾರ ಪೆಟ್ರೋಲ್ ದರವನ್ನು ಏರಿಸಿರುವ ವಿರುದ್ಧ ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಇಂದು ಪ್ರತಿಭಟನೆ ನಡೆಯಿತು. ಹೆಬ್ರಿಯ ಪೆಟ್ರೋಲ್ ಬಂಕ್ ಎದುರುಗಡೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಬೆಲೆ ಏರಿಕೆ ವಿರುದ್ಧ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುದ್ರಾಡಿ ಮಂಜುನಾಥ ಪೂಜಾರಿ ಮಾತನಾಡಿ, ಮೋದಿ ಸರ್ಕಾರ ಜನರಿಗೆ ಸುಳ್ಳು ಹೇಳಿ ಮೋಡಿ ಮಾಡುತ್ತಾ ಬಂದಿದೆ. ಅಚ್ಚೇ ದಿನ್ ತರುತ್ತೇನೆಂದು ಜನರಿಗೆ ಮೋಸ ಮಾಡಿದ್ದಾರೆ. ಭಾರತದ ಇತಿಹಾಸದಲ್ಲಿ ಕಂಡು ಅರಿಯದ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆಯನ್ನು ಕೇಂದ್ರ ಸರಕಾರ ಮಾಡಿದೆ. ಸುಳ್ಳು ಹೇಳಿ ಅಧಿಕಾರ ಪಡೆದು ಈಗ ಜನರನ್ನು ವಂಚಿಸುತ್ತಿದ್ದಾರೆ ಎಂದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಮುಖಂಡರಾದ ಚಂದ್ರಶೇಖರ ಬಾಯರಿ, ಶಶಿಕಲಾ ಡಿ. ಪೂಜಾರಿ, ಲಕ್ಷ್ಮಣ ಆಚಾರ್ಯ, ಜನಾರ್ದನ್ ಎಚ್ , ದಿನೇಶ್ ಶೆಟ್ಟಿ ಹುತ್ತುರ್ಕೆ ಹಾಗೂ ಪಕ್ಷದ ವಿವಿಧ ಪ್ರಮುಖರು ಉಪಸ್ಥಿತರಿದ್ದರು.
