ಬೆಂಗಳೂರು : ಈಗಾಗಲೇ ರಾಜ್ಯ ಸರ್ಕಾರ ಬೆಂಗಳೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಜೂ.14 ರಿಂದ 21 ರ ವರೆಗೆ ಲಾಕ್ ಡೌನ್ ಸಡಿಲಗೊಳಿಸಿ ಘೋಷಿಸಿದೆ. ವಾರಾಂತ್ಯ ಕಫ್ರ್ಯೂ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಜೂ.14 ರಿಂದ ಜೂ.21ರ ವರೆಗೆ ನೈಟ್ ಹಾಗೂ ವೀಕೆಂಡ್ ಕಫ್ರ್ಯೂ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ.
ರಾಜ್ಯ ಸರ್ಕಾರವು ಜೂ.14ರ ನಂತರ ಬೆಂಗಳೂರು ನಗರದಲ್ಲಿ ಅನ್ ಲಾಕ್ ಮಾರ್ಗಸೂಚಿ ಜಾರಿಗೆ ತಂದಿದೆ. ಇದರ ಅನ್ವಯ ಜೂ.21 ರ ವರೆಗೆ ನೈಟ್ ಹಾಗೂ ವೀಕೆಂಡ್ ಕಫ್ರ್ಯೂ ಜಾರಿಗೊಳಿಸಿದ್ದು, ಇದು ಜೂ.21ರ ವರೆಗೆ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಸೂಚನೆಯಂತೆ ವೀಕೆಂಡ್ ಕಫ್ರ್ಯೂ ಜೂನ್ 18 ರ ಶುಕ್ರವಾರ ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 5 ಗಂಟೆಯ ವರೆಗೆ ಜಾರಿಯಲ್ಲಿರಲಿವೆ. ಜೂ. 14ರಿಂದ ಜೂ.21ರ ವರೆಗೆ ನಗರದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಅನ್ ಲಾಕ್ ಮಾರ್ಗಸೂಚಿಯಂತೆ ಕೆಲ ಚಟುವಟಿಕೆಗಳಿಗಷ್ಟೇ ಅವಕಾಶವಿದ್ದು, ಕಫ್ರ್ಯೂ ನಿಯಮ ಉಲ್ಲಂಘಿಸುವವರ ವಿರುದ್ಧ ಡಿಸಾಸ್ಟರ್ ಮ್ಯಾನೇಜ್‍ಮೆಂಟ್ 2005ರ ಸೆಕ್ಷನ್ 51 ರಿಂದ 60ರ ಅಡಿಯಲ್ಲಿ, ಐಪಿಸಿ ಸೆಕ್ಷನ್ 188, ಕರ್ನಾಟಕ ಎಪಿಡೆಮಿಕ್ ಡೀಸಿಸಸ್ ಕಾಯ್ದೆ 2020ರ ಸೆಕ್ಷನ್ 4, 5 ಮತ್ತು 10ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.