ಉಡುಪಿ : “ಹಡಿಲು ಭೂಮಿ ಕೃಷಿ ಅಂದೋಲನ”ದಡಿ ನಡೆಯುತ್ತಿರೋ ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಡಿಲು ಭೂಮಿ ಕೃಷಿ ಚಟುವಟಿಕೆಗಳನ್ನು ಶಾಸಕ ಕೆ. ರಘುಪತಿ ಭಟ್ ಅವರು ವೀಕ್ಷಿಸಿದರು.
ಈ ಭಾಗದಲ್ಲಿ ಕೇದಾರೋತ್ಥಾನ ಟ್ರಸ್ಟ್ ಮೂಲಕ 50 ಎಕರೆ ಹಡಿಲು ಭೂಮಿಯನ್ನು ಸಾವಯುವ ಕೃಷಿ ಮಾಡಲಾಗುತ್ತಿದ್ದು, ಈಗಾಗಲೇ ಕೃಷಿಭೂಮಿ ಸುತ್ತಮುತ್ತಲಿನ ತೋಡುಗಳನ್ನು ಅಭಿವೃದ್ಧಿ ಗೊಳಿಸಲಾಗಿದ್ದು, ಪ್ರಥಮ ಹಂತದ ಉಳುಮೆ ಕಾರ್ಯ ಪೂರ್ಣಗೊಂಡಿದೆ. ಉತ್ಸಾಹದಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಊರಿನ ಹಿರಿಯರು, ಭೂ ಮಾಲಕರು ಹಾಗೂ ಸ್ಥಳೀಯರಿಗೆ ಶಾಸಕ ಕೆ. ರಘುಪತಿ ಭಟ್ ಅವರು ಕೃತಜ್ಞತೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣ ದೇವಾಡಿಗ, ಉಪಾಧ್ಯಕ್ಷ ಉದಯ್ ಪೂಜಾರಿ, ಸದಸ್ಯ ನವೀನ್, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ, ಸದಸ್ಯರಾದ ದಿನಕರ್ ಬಾಬು, ದಿನೇಶ್ ಪೂಜಾರಿ ಮತ್ತು ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿ ಶಂಕರ್, ಜೀವನ ಯಂತ್ರ ಅಗ್ರಿ ಸಲ್ಯೂಷನ್ಸ್ ಸಂಸ್ಥೆಯ ಶ್ರೀಕಾಂತ್ ಭಟ್ ಮತ್ತು ಸ್ಥಳೀಯ ಕೃಷಿಕರು ಉಪಸ್ಥಿತರಿದ್ದರು.