ಕಾಪು : ಪ್ರಾಕೃತಿಕ ವಿಕೋಪ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಣೆ
Published
0
ಕಾಪು : ಶಾಸಕ ಲಾಲಾಜಿ ಆರ್ ಮೆಂಡನ್ ಇವರ ಅಧ್ಯಕ್ಷತೆಯಲ್ಲಿ ಕಾಪು ತಾಲೂಕಿನಲ್ಲಿ ಪ್ರಾಕೃತಿಕ ವಿಕೋಪದಿಂದ ಮನೆಹಾನಿಯಾದ ಒಟ್ಟು 13 ಪ್ರಕರಣಗಳಿಗೆ ಒಟ್ಟು 3,18,250 ಮೊತ್ತದ ಚೆಕ್ ವಿತರಿಸಲಾಯಿತು.
ಕಾಪು ತಾಲೂಕು ತಹಶೀಲ್ದಾರರಾದ ಶ್ರೀಮತಿ ಪ್ರತಿಭಾ ಆರ್, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಿಲ್ಪ ಜಿ ಸುವರ್ಣ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಶಶಿಪ್ರಭಾ ಶೆಟ್ಟಿ, ಕುತ್ಯಾರು ಗ್ರಾ.ಪಂ ಅಧ್ಯಕ್ಷರಾದ ಲತಾ ಆಚಾರ್ಯ, ಉಪತಹಶೀಲ್ದಾರ್ ಚಂದ್ರಹಾಸ್ ಬಂಗೇರ, ಕಂದಾಯ ನಿರೀಕ್ಷಕರಾದ ಸುಧೀರ್ ಕುಮಾರ್ ಶೆಟ್ಟಿ ಮತ್ತು ಕಾಪು ತಾಲೂಕಿನ ಫಲಾನುಭವಿಗಳು ಉಪಸ್ಥಿತರಿದ್ದರು.