ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಚಾಂತಾರು ಗ್ರಾಮದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ. ನಾರಾಯಣ ನಾಯಕ್(45) ನಾಪತ್ತೆಯಾದವರು. ಎಣ್ಣೆ ಕಪ್ಪು ಮೈ ಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು, 5 ಅಡಿ 2 ಇಂಚು ಉದ್ದ ಇದ್ದಾರೆ. ಜೂ.14 ರಂದು ಮನೆಯಿಂದ ತೆರಳಿದವರು ಕೆಲಸಕ್ಕೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿರುತ್ತಾರೆ. ಮಾನಸಿಕ ಖಾಯಿಲೆಯಿಂದ ಅವರು ಬಳಲುತ್ತಿದ್ದರು ಎನ್ನಲಾಗಿದೆ. ಮನೆಯಿಂದ ಹೊರಡುವಾಗ ಮರೂನ್ ಶರ್ಟ್ ಮತ್ತು ಪ್ಯಾಂಟ್ ಧರಿಸಿದ್ದರು. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರ ಗುರುತು ಪತ್ತೆಯಾದಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ 0820 – 2561044, ಪೊಲೀಸ್ ವೃತ್ತ ನಿರೀಕ್ಷಕರು, ಬ್ರಹ್ಮಾವರ ವೃತ್ತ 2561966 ಸಂಖ್ಯೆಯನ್ನು ಸಂಪರ್ಕಿಸಲು ಕೋರಲಾಗಿದೆ.
Advertisement. Scroll to continue reading.
In this article:brahmavar, Diksoochi news, diksoochi Tv, diksoochi udupi, missing case
Click to comment