ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಅಸೀಲ್ ಅಕ್ರಮ್ ನೇತೃತ್ವದ ಉಡುಪಿ ಜಿಲ್ಲಾ ನಿಯೋಗವು ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವಲ್ಲಿ ಸರಕಾರದ ನಿರ್ಲಕ್ಷ್ಯದ ಬಗ್ಗೆ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಸಾಮಾಜಿಕ ಕಾರ್ಯಕರ್ತ ಅಮೃತ್ ಶೆಣೈ ಮತ್ತು ಪತ್ರಕರ್ತ ಶಶಿಧರ್ ಹೆಮ್ಮಾಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಜಿಲ್ಲೆಗೆ ಆಗಿರುವ ಅನ್ಯಾಯದ ವಿರುದ್ಧ , ಸರಕಾರಿ ಮೆಡಿಕಲ್ ಕಾಲೇಜಿಗಾಗಿ ನಮ್ಮ ಆಂದೋಲನಕ್ಕೆ ಅವರ ಬೆಂಬಲಿಗರೊಂದಿಗೆ ಸಂಪೂರ್ಣ ಬೆಂಬಲ ನೀಡುವುದಾಗಿ ಅವರೆಲ್ಲರೂ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಮಸೂದ್ ಮನ್ನಾ, ಜಿಲ್ಲಾ ಮುಖಂಡರಾದ ನವಾಝ್ ಶೇಕ್, ಉಡುಪಿ ಜಿಲ್ಲಾ ಸಮಿತಿ ಸದಸ್ಯ ಅರ್ಫಾಝ್, ಕುಂದಾಪುರ ಜಿಲ್ಲಾ ಸಮಿತಿ ಸದಸ್ಯ ಸಹದ್ ಬಸ್ರೂರು ಉಪಸ್ಥಿತರಿದ್ದರು.
Advertisement. Scroll to continue reading.

In this article:campus front of india, Diksoochi news, diksoochi Tv, diksoochi udupi, pramodh madhwaraj

Click to comment