Connect with us

Hi, what are you looking for?

Diksoochi News

ರಾಜ್ಯ

ಗ್ರೇಡ್ ಬದಲು ಅಂಕಗಳ ಮಾದರಿಯಲ್ಲೇ ದ್ವಿತೀಯ ಪಿಯು ಫಲಿತಾಂಶ ಪ್ರಕಟ

0

ಬೆಂಗಳೂರು : ರಾಜ್ಯ ಸರ್ಕಾರ ದ್ವಿತೀಯ ಪಿಯು ಪರೀಕ್ಷೆಯನ್ನು ಕೊರೋನಾ ಕಾರಣದಿಂದಾಗಿ ರದ್ದು ಪಡಿಸಿತ್ತು. ಈ ಬಾರಿ ಹಿಂದಿನ ಪ್ರಥಮ ಪಿಯುಸಿ, ಎಸ್ ಎಸ್ ಎಲ್ ಸಿ ಅಂಕಗಳ ಆಧಾರದ ಮೇಲೆ ಗ್ರೇಡ್ ರೂಪದಲ್ಲಿ ಫಲಿತಾಂಶ ಪ್ರಕಟಿಸೋದಾಗಿ ಘೋಷಿಸಿತ್ತು. ಇದೀಗ ದ್ವಿತೀಯ ಪಿಯು ಗ್ರೇಡ್ ಬದಲಾಗಿ ಅಂಕಗಳ ಆಧಾರದ ಮೇಲೆಯೇ ಫಲಿತಾಂಶ ಪ್ರಕಟಗೊಳಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕಿ ಸ್ನೇಹಲ್ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಗ್ರೇಡ್ ಮಾದರಿಯಲ್ಲಿ ಪ್ರಕಟಿಸೋದರಿಂದಾಗಿ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕೆ ತೊಂದರೆಯಾಗಲಿದೆ.
ಇದರಿಂದಾಗಿ ಈ ಕ್ರಮವನ್ನು ಬದಲಿಸಲಾಗುತ್ತಿದೆ. ಹಳೆಯ ಪದ್ದತಿಯಂತೆಯೇ ಅಂಕಗಳ ಮಾದರಿಯಲ್ಲಿ ಫಲಿತಾಂಶವನ್ನು ಪ್ರಕಟಿಸುವುದಾಗಿ ತಿಳಿಸಿದ್ದಾರೆ. ಇನ್ನೂ ಈ ಬಾರಿಯ ದ್ವಿತೀಯ ಪಿಯು ಫಲಿತಾಂಶ ಜೂನ್ ಕೊನೆಯ ವಾರದಲ್ಲಿ ಪ್ರಕಟಿಸುವ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಗ್ರೇಡ್ ಮಾದರಿಯಲ್ಲಿ ಫಲಿತಾಂಶ ಪ್ರಕಟಿಸುವುದರಿಂದ ಪಿಯು ವಿದ್ಯಾರ್ಥಿಗಳಿಗೆ ಮುಂದಿನ ಉದ್ಯೋಗಾವಕಾಶದ ಸಂದರ್ಭದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಈ ಎಲ್ಲವನ್ನು ಗಮನದಲ್ಲಿ ಇಟ್ಟುಕೊಂಡು, ದ್ವಿತೀಯ ಪಿಯು ಫಲಿತಾಂಶವನ್ನು ಹಳೆಯ ಮಾದರಿಯಲ್ಲಿಯೇ ಅಂಕಗಳ ರೀತಿಯಲ್ಲಿ ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!