ವರದಿ : ರವೀಂದ್ರ.ಟಿ.
ಬೈಂದೂರು : ಕಳೆದ ಹಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಗಾಳಿ ಮಳೆಗೆ ಬೈಂದೂರು ತಾಲೂಕಿನ ತಗ್ಗರ್ಸೆ ಗ್ರಾಮದ ನೆಲ್ಯಾಡಿಯ ಅರಳಿಕಟ್ಟೆಮನೆ ಸುಶೀಲ ಶೆಡ್ತಿ ಎಂಬುವವರ ಮನೆಯ ಮೇಲೆ ಮಾವಿನ ಮರ ಬಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ. ಈ ವೇಳೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಮನೆಯೊಳಗಿದ್ದವರಿಗೆ ಆಗುತ್ತಿದ್ದ ಅನಾಹುತ ತಪ್ಪಿಸಿದರು.
ಸ್ಥಳಕ್ಕೆ ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ ಭೇಟಿ ನೀಡಿ ಕುಟುಂಬಕ್ಕೆ ಪರಿಹಾರದ ಭರವಸೆ ನೀಡಿದ್ದಾರೆ.
Advertisement. Scroll to continue reading.