ದೆಹಲಿ : 100 ಕ್ಕೂ ಹೆಚ್ಚು ಮಹಿಳೆಯರಿಗೆ ಆನ್ಲೈನ್ ಮೂಲಕ ಕಿರುಕುಳ ನೀಡುತ್ತಿದ್ದ ಯುವಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 22 ವರ್ಷದ ವಿಕಾಸ್ ಕುಮಾರ್ ಬಂಧಿತ ಆರೋಪಿ. ಸೋಶಿಯಲ್ ಮೀಡಿಯಾದಲ್ಲಿ ಆತ ಮಹಿಳೆಯರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ದೆಹಲಿಯ ಮಹಿಳೆಯೊಬ್ಬರು ದೆಹಲಿ ಸೈಬರ್ ಕ್ರೈಂಗೆ ದೂರು ನೀಡಿದ್ದರು. ಆರೋಪಿಯು ನಕಲಿ ಫೇಸ್ ಬುಕ್ ಖಾತೆಗಳನ್ನು ಬಳಸಿಕೊಂಡು ಕುಕೃತ್ಯ ಎಸಗುತ್ತಿದ್ದ ಎಂದು ತಿಳಿದುಬಂದಿದೆ.
Advertisement. Scroll to continue reading.