ಉಡುಪಿ : “ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ಕೃಷಿ ಕ್ರಾಂತಿ ನಡೆಯುತ್ತಿದೆ. ಇಂದು ಶಾರದಾ ಕಲ್ಯಾಣ ಮಂಟಪ ಬೀಡಿನಗುಡ್ಡೆ ರಸ್ತೆ ಬ್ರಿಡ್ಜ್ ಬಳಿ ಒಳಕಾಡು ವಾರ್ಡ್ ನ 7 ಎಕರೆ ಹಡಿಲು ಭೂಮಿ ಕೃಷಿಯ ನಾಟಿ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು, ಸ್ವದೇಶ್ ಹೋಟೆಲ್ಸ್ ಉಡುಪಿ, ಎ.ಸಿ.ಸಿ.ಇ.ಎ ಉಡುಪಿ ಗೌರವಾಧ್ಯಕ್ಷ ನಾಗೇಶ್ ಹೆಗ್ಡೆ ಹಾಗೂ ಶಾಸಕ ಕೆ. ರಘುಪತಿ ಭಟ್ ಭೂ ಮಾತೆಗೆ ಹಾಲನ್ನು ಅರ್ಪಿಸುವ ಮೂಲಕ ನಾಟಿಗೆ ಚಾಲನೆ ನೀಡಿ ಸ್ಥಳೀಯರೊಂದಿಗೆ ಸೇರಿ ನೇಜಿ ನೆಟ್ಟರು.
ಈ ಸಂದರ್ಭ ನಗರ ಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಗಿರೀಶ್ ಅಂಚನ್, ಸ್ಥಳೀಯ ನಗರಸಭಾ ಸದಸ್ಯ ರಜನಿ ಹೆಬ್ಬಾರ್, ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ಹೆಬ್ಬಾರ್, ಉದ್ಯಮಿ ಸಂತೋಷ್ ಶೆಟ್ಟಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಮುರಳಿ ಕಡೆಕಾರ್, ಕೋಶಾಧಿಕಾರಿ ರಾಘವೇಂದ್ರ ಕಿಣಿ ಹಾಗೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಶಿವಮೊಗ್ಗ ಮತ್ತು ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರದ ಹಿರಿಯ ಕ್ಷೇತ್ರ ಅಧಿಕಾರಿ ಶಂಕರ್, ಸ್ಥಳೀಯ ಸಂಘ ಸಂಸ್ಥೆಗಳ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.