ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ ), ಬ್ರಹ್ಮಾವರ ಉಪ್ಪೂರ್ ವಲಯದ ಜಾತಬೆಟ್ಟು ಒಕ್ಕೂಟದ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ಪರಿಸರ ಜಾಗೃತಿ ಕಾರ್ಯಕ್ರಮ ಚಿತ್ತಾರಿ ಮಹಾಬಲೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯಿತು. ಈ ಸಂದರ್ಭ ಬ್ರಹ್ಮಾವರ ಅರಣ್ಯ ಇಲಾಖೆ ಅಧಿಕಾರಿ ಹರೀಶ್ ಹೆಚ್. ಪರಿಸರ ಜಾಗೃತಿಯ ಬಗ್ಗೆ ತಿಳಿಸಿದರು. ಮಹಿಳೆಯರಿಗೆ ಯಾವ ಯಾವ ಸಸಿಗಳಲ್ಲಿ ಎಷ್ಟು ಪ್ರಮಾಣದ ಆಮ್ಲಜನಕ ಇರುತ್ತದೆ ಎಂಬ ಬಗ್ಗೆ ಹಾಗೂ ಪರಿಸರವನ್ನು ಉಳಿಸಿ ಎನ್ನುವುದರ ಬಗ್ಗೆ ಮಾಹಿತಿ ನೀಡಿದರು. ಈ ವೇಳೆ ಜಾಥಬೆಟ್ಟು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶೋಭಾ ಅವರು ಸಸಿ ನಾಟಿ ಮಾಡಿದರು.
ಈ ಸಂದರ್ಭ ಚಿತ್ತಾರಿ ಮಹಾಬಲೇಶ್ವರ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಯು. ಕರುಣಾಕರ ರಾವ್, ಜನಜಾಗೃತಿ ವೇದಿಕೆಯ ವಲಯ ಅಧ್ಯಕ್ಷ ರಾಜು ಪೂಜಾರಿ, ಜನಜಾಗೃತಿ ವೇದಿಕೆ ಸದಸ್ಯ ಪ್ರವೀಣ್ ಕುಮಾರ್ ಹಾಗೂ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸೇವಾ ಪ್ರತಿನಿಧಿ ಮಂಜುಳಾ ಅವರು ಸ್ವಾಗತಿಸಿದರು. ವಲಯದ ಮೇಲ್ವಿಚಾರಕಿ ಶ್ರೀಮತಿ ಬಾಬಿ ವಂದಿಸಿದರು. ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ನೇತ್ರಾವತಿ ನಿರೂಪಿಸಿದರು.