ಕಾರವಾರ : ಕದಂಬ ನೌಕಾನೆಲೆಗೆ ಗುರುವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದರು. ನೌಕಾನೆಲೆಯ ಎರಡನೇ ಹಂತದ ವಿಸ್ತರಣಾ ಕಾಮಕಾರಿಗಳ ವೈಮಾನಿಕ ಸಮೀಕ್ಷೆ ನಡೆಸಿದರು. ನೌಕಾಪಡೆ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಜೊತೆ ಗೋವಾದಿಂದ ಹೆಲಿಕಾಪ್ಟರ್ ಮೂಲಕ ಐ ಎನ್ ಎಸ್ ಕದಂಬ ನೌಕಾನೆಲೆಯ ಹೆಲಿಪ್ಯಾಡ್ ನಲ್ಲಿ ಆಗಮಿಸಿ ವೈಮಾನಿಕ ಸಮೀಕ್ಷೆ ನಡೆಸಿದರು.
ವೆಸ್ಟರ್ನ್ ನೇವಲ್ ಕಮಾಂಡ್, ಫ್ಲ್ಯಾಗ್ ಆಫೀಸರ್ ಕಮಾಂಡಿಂಗ್ ಇನ್ ಚೀಫ್, ವೈಸ್ ಅಡ್ಮಿರಲ್ ಆರ್.ಹರಿ ಕುಮಾರ ಮತ್ತು ಕರ್ನಾಟಕ ನೌಕಾ ಪ್ರದೇಶದ ಧ್ವಜ ಅಧಿಕಾರಿ ರಿಯರ್ ಅಡ್ಮಿರಲ್ ಮಹೇಶ ಸಿಂಗ್ ಸಚಿವರನ್ನು ಸ್ವಾಗತಿಸಿದರು.
ಬಳಿಕ ಸಚಿವರು ನೌಕಾನೆಲೆ ಸಿಬ್ಬಂದಿಗಳಿಗಾಗಿ ನೂತನವಾಗಿ ನಿರ್ಮಿಸಲಾಗಿರುವ ವಸತಿ ಗೃಹಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕಾಮಗಾರಿಯ ಬಗ್ಗೆ ಸಬಂಧಪಟ್ಟವರೊಂದಿಗೆ ಮಾಹಿತಿ ಪಡೆದು ಚರ್ಚಿಸಿದರು.
Advertisement. Scroll to continue reading.
In this article:diksoochi Tv, diksoochi udupi, Diksoochinews, karwar, rajanath singh, ಕದಂಬ ನೌಕಾನೆಲೆ
Click to comment