ಬೆಂಗಳೂರು : ನಾಳೆಯೇ ರಾಜ್ಯದ ಎಸ್ ಎಸ್ ಎಲ್ ಸಿ ಪರೀಕ್ಷೆ ದಿನಾಂಕ ಘೋಷಣೆಯಾಗಲಿದೆ.
ನಾಳೆ ವಿಕಾಸಸೌಧದದಲ್ಲಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಎಸ್‌ಎಸ್‌ಎಲ್ ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಸಿಇಒ, ಎಸ್ ಪಿ, ಡಿಎಚ್ ಒಗಳು ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಹಾಗೂ ಅಪರ ಮುಖ್ಯ ಕಾರ್ಯದರ್ಶಿಯ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ.
ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ ಬಳಿಕ ಸಚಿವರು ಮಧ್ಯಾಹ್ನ 1 ಗಂಟೆಗೆ ಸುದ್ದಿಗೋಷ್ಟಿ ನಡೆಸಲಿದ್ದಾರೆ. ಈ ಸಂದರ್ಭ ಎಸ್ ಎಸ್ ಎಲ್ ಸಿ ಪರೀಕ್ಷೆ ದಿನಾಂಕ ಪ್ರಕಟಿಸಲಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಮುಖವಾಗುತ್ತಿದ್ದರೂ, ಡೆಲ್ಟಾ ಪ್ಲಸ್ ಭೀತಿ ಕಾಡುತ್ತಿದೆ. ಈ ನಡುವೆಯೂ ಪರೀಕ್ಷೆ ನಡೆಸಲು ಮಹತ್ವದ ಚರ್ಚೆ ನಡೆಯಲಿದೆ. ಅಧಿಕಾರಿಗಳ ಸಲಹೆ, ಸೂಚನೆಯೊಂದಿಗೆ ನಾಳೆಯೇ ಎಸ್‌ಎಸ್‌ಎಲ್ ಸಿ ಪರೀಕ್ಷೆಯ ದಿನಾಂಕ ಪ್ರಕಟವಾಗಲಿದೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, sslc exam, Suresh Kumar

Click to comment